More

    ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ

    ಬೀದರ್: ನಗರದ ಹೊರವಲಯದ ಗೋರನಳ್ಳಿ ಸಮೀಪದ ಶರಣಬಸವ ಕ್ಯಾಂಪಸ್‍ನಲ್ಲಿ ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜು, ಶರಣಬಸವೇಶ್ವರ ಪದವಿಪೂರ್ವ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜು ಮತ್ತು ಶರಣ ಬಸವ ಪಬ್ಲಿಕ್ ಸ್ಕೂಲ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸೋಮವಾರ ಹರ್ಷೋಲ್ಲಾಸದೊಂದಿಗೆ ಆಚರಿಸಲಾಯಿತು.

    ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪೂರೈಸಿದ ಪ್ರಯುಕ್ತ ವಿದ್ಯಾರ್ಥಿಗಳು 75 ಸಂಖ್ಯೆ ಆಕಾರದಲ್ಲಿ ನಿಂತುಕೊಂಡು ಗಮನ ಸೆಳೆದರು. ದೇಶಭಕ್ತಿ ಗೀತೆ ತಾಳಕ್ಕೆ ತಕ್ಕಂತೆ ಆಕರ್ಷಕ ನೃತ್ಯ ಪ್ರದರ್ಶಿಸಿದರು. ತಮ್ಮ ಭಾಷಣದಲ್ಲಿ ಸ್ವಾತಂತ್ರ್ಯದ ಇತಿಹಾಸ ಪರಿಚಯಿಸಿದರು.

    ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜು ನಿರ್ದೇಶಕಿ ಡಾ. ಉಮಾ ದೇಶಮುಖ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ, ಡಾ. ದಾಕ್ಷಾಯಣಿ ತಾಯಿ, ಚಿ. ದೊಡ್ಡಪ್ಪ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ನಿರ್ದೇಶಕ ಶರಣಬಸಪ್ಪ ದೇಶಮುಖ ಅವರ ಮಾರ್ಗದರ್ಶನದಲ್ಲಿ ಮಕ್ಕಳಲ್ಲಿ ದೇಶಪ್ರೇಮ, ಭಾವೈಕ್ಯತೆ ಬೆಳೆಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು. ದೇಶ ಸೇವೆಗೆ ಪ್ರತಿಯೊಬ್ಬರೂ ಸದಾ ಸಿದ್ಧರಿರಬೇಕು ಎಂದರು.

    ಅಂತರ ಶಾಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ್, ಶರಣಬಸವೇಶ್ವರ ಪದವಿಪೂರ್ವ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜು ಪ್ರಾಚಾರ್ಯ ಸತೀಶ ಪ್ರತಾಪುರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts