More

    ಸ್ವಾತಂತ್ರ್ಯೋತ್ಸವದಲ್ಲಿ ಕರೊನಾ ನಿಯಮ ಪಾಲನೆ ಕಡ್ಡಾಯ, ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಸಲಹೆ, ಅಧಿಕಾರಿಗಳೊಂದಿಗೆ ಪೂರ್ವಭಾವಿ ಚರ್ಚೆ

    ನೆಲಮಂಗಲ: ಕರೊನಾ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ಸರಳವಾಗಿ ಆಚರಿಸಲು ತಾಲೂಕು ಆಡಳಿತ ಸಜ್ಜಾಗಿದೆ ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ತಿಳಿಸಿದರು.

    ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸ್ವಾತಂತ್ರ್ಯ ದಿನಾಚರಣೆ ಕುರಿತು ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

    ಕೋವಿಡ್ ನಿಯಮ ಪಾಲನೆ ಮಾಡಿಕೊಂಡು ಸ್ವಾತಂತ್ರ್ಯ ದಿನವನ್ನು ಪ್ರತಿವರ್ಷದಿಂದ ನಗರದ ಡಾ.ಬಿ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಚರಿಸಬೇಕು. ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳ ಈ ಬಾರಿ ಆಹ್ವಾನಿಸುತ್ತಿಲ್ಲ. ಸಾಂಸ್ಕೃತಿ ಕಾರ್ಯಕ್ರಮ ಇರುವುದಿಲ್ಲ ಎಂದರು.

    ವೈದ್ಯರು, ಶ್ರೂಶುಶಕಿ, ಪೌರಕಾರ್ಮಿಕರು, ಪೊಲೀಸ್ ಇಲಾಖೆ ಸಿಬ್ಬಂದಿಗಳನ್ನು ಸನ್ಮಾನಿಸಲಾಗುವುದು ಎಂದರು.

    ಕೋವಿಡ್ 3ನೇ ಅಲೆ ಬಗ್ಗೆ ಎಚ್ಚರಿಕೆವಹಿಸಬೇಕಿದ್ದು, ಆದಷ್ಟು ಮುಂಜಾಗ್ರತ ಕ್ರಮ ಅನುಸರಿಬೇಕು. ಪರಸ್ಪರ ಅಂತರ, ಮಾಸ್ಕ್ ಸೇರಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಜತೆಗೆ ಸಕಲ ಮುಂಜಾಗ್ರತಾ ಕ್ರಮ ಅನುಸರಿಸಿ ರಾಷ್ಟ್ರೀಯ ಹಬ್ಬ ಆಚರಣೆ ಮಾಡಬೇಕು ಎಂದು ತಿಳಿಸಿದರು.

    ಅಧಿಕಾರಿಗಳಿಗೆ ನೋಟಿಸ್: ಪೂರ್ವಭಾವಿ ಸಭೆಗೆ ಗೈರಾದ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುದು. ಜತೆಗೆ ಸ್ವಾತಂತ್ರ್ಯ ದಿನವನ್ನು ಪ್ರತಿಯೊಂದು ಇಲಾಖೆಯಲ್ಲೂ ಆಚರಣೆ ಮಾಡಬೇಕು. ಆಚರಣೆ ಮಾಡದ ಇಲಾಖೆ ಮುಖ್ಯಸ್ಥರ ವಿರುದ್ಧ ಶಿಸ್ತುಕ್ರಮಕ್ಕಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಹಸೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.

    ಶಿಸ್ತೇದಾರ್ ಶ್ರೀನಿವಾಸಮೂರ್ತಿ, ವಿಮಾಲಾ, ರಾಜಸ್ವನಿರೀಕ್ಷಕರಾದ ಎ.ರವಿಕುಮಾರ್, ಸುದೀಪ್, ಎಸ್‌ಐ ಎನ್.ಸುರೇಶ್, ವಿ.ಅಂಜನ್‌ಕುಮಾರ್, ತಾಪಂ ಇಒ ಮೋಹನ್‌ಕುಮಾರ್, ಟಿಎಚ್‌ಒ ಹರೀಶ್, ಬಿಇಒ ಕೆ.ಸಿ.ರಮೇಶ್, ಸಿಡಿಪಿಒ ಲತಾ, ನಗರಸಭೆ ಪೌರಾಯುಕ್ತ ಮಂಜುನಾಥ್, ಕಾರ್ಮಿಕ ನಿರೀಕ್ಷಕ ಧನಪಾಲ್‌ನಾಯಕ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ, ಡಿಎಸ್‌ಎಸ್‌ಒ ಅಧ್ಯಕ್ಷ ಬಿ.ಆರ್.ಭಾಸ್ಕರ್‌ಪ್ರಸಾದ್, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಆರ್.ಪ್ರಮೋದ್‌ಕುಮಾರ್, ಕಸಾಪ ತಾಲೂಕು ಅಧ್ಯಕ್ಷ ಸಿ.ಕೇಶವ್‌ಮೂರ್ತಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವಾಸುದೇವಮೂರ್ತಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts