More

    ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘಕ್ಕೆ 1.50 ಲಕ್ಷ ರೂ. ಸಹಾಯಧನ

    ರಾಣೆಬೆನ್ನೂರ: ಬಾಬು ಜಗಜೀವನರಾಮ್ ಹೆಸರಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಯುವಕರಿಗೆ ಕೆಲಸ ನೀಡಲು ಯೋಜನೆ ಜಾರಿಗೊಳಿಸಲಾಗುವುದು. ಸ್ತ್ರೀ ಸಾಮರ್ಥ್ಯ ಯೋಜನೆ ಮಾದರಿಯಲ್ಲಿ ಪ್ರತಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯುವ ಶಕ್ತಿ ಸಂಘ ರಚಿಸಿ ಯುವಕರಿಗೆ ಸ್ವ ಉದ್ಯೋಗ ಕೈಗೊಳ್ಳಲು ಪ್ರತಿ ಸಂಘಕ್ಕೆ ಸರ್ಕಾರದಿಂದ 1.50 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ನಗರದಲ್ಲಿ ಗುರುವಾರ 51.90 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

    ಬಡ ಕೂಲಿಕಾರರ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ರಾಜ್ಯದಲ್ಲಿ 4 ಸಾವಿರ ವಿಶೇಷ ಅಂಗನವಾಡಿ ಆರಂಭಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ಜಿಲ್ಲೆಯ 15 ಸಾವಿರ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ 1 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್​ಶಿಪ್ ಆರಂಭಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

    ಹಾವೇರಿ ಜಿಲ್ಲೆಗೆ 25 ವರ್ಷ ಪೂರೈಸಿದ ಶುಭ ಸಂದರ್ಭದಲ್ಲಿ ನವೆಂಬರ್ ಮಾಹೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನದ ಅಂಗವಾಗಿ ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದು ಖ್ಯಾತವಾಗಿರುವ ರಾಣೆಬೆನ್ನೂರ ತಾಲೂಕಿನ ಗಡಿ ಭಾಗದಲ್ಲಿ ಜಿಲ್ಲೆಯನ್ನು ಪ್ರವೇಶಿಸುವ ಹೆದ್ದಾರಿ ಮಾರ್ಗದಲ್ಲಿ ಒಂದು ದೊಡ್ಡ ಹೆಬ್ಬಾಗಿಲು ನಿರ್ಮಾಣ ಮಾಡಲು 5 ಕೋಟಿ ರೂ. ಮಂಜೂರಾತಿ ನೀಡಲಾಗಿದೆ ಎಂದರು.

    ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ಸಂಸದ ಜಿ.ಎಂ. ಸಿದ್ದೇಶ್ವರ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಅರುಣಕುಮಾರ ಪೂಜಾರ, ವಿರೂಪಾಕ್ಷಪ್ಪ ಬಳ್ಳಾರಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts