More

    ಹಕ್ಕು ಚಲಾಯಿಸಿ ಸದೃಢ ಭಾರತಕ್ಕೆ ಕೈ ಜೋಡಿಸಿ

    ಧಾರವಾಡ: ಮತದಾನ ಎಂಬುದು ಭಾರತದ ಸಂವಿಧಾನವು ದೇಶದ ಅರ್ಹ ನಾಗರಿಕರಿಗೆ ನೀಡಿರುವ ಪವಿತ್ರವಾದ ಹಕ್ಕು. ಪ್ರತಿಯೊಬ್ಬರೂ ಹಕ್ಕು ಚಲಾಯಿಸಿ ಸಶಕ್ತ, ಸದೃಢ ಭಾರತ ನಿರ್ವಿುಸಲು ಕೈ ಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ ಹೇಳಿದರು.

    ನಗರದ ಸೃಜನಾ ರಂಗ ಮಂದಿರದಲ್ಲಿ ಭಾರತ ಚುನಾವಣೆ ಆಯೋಗ, ಜಿಲ್ಲಾಡಳಿತದಿಂದ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಭವಿಷ್ಯ ಮತದಾರರ ಕೈಯಲ್ಲಿದೆ. ಚುನಾವಣೆಗಳಲ್ಲಿ ತಪ್ಪದೆ ಮತದಾನ ಮಾಡಿ ಉತ್ತಮ ಮತ್ತು ಪ್ರಾಮಾಣಿಕ ಜನಪ್ರತಿನಿಧಿ ಆಯ್ಕೆ ಮಾಡಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು.

    ಆಮಿಷ, ಪ್ರಭಾವಕ್ಕೆ ಒಳಗಾಗಿ ಮತ್ತು ಮತದಾನದ ನಂತರ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಲಿಲ್ಲ ಎಂದು ಪರಿತಪಿಸುವ ಬದಲು ಎಚ್ಚರಿಕೆಯಿಂದ ಮತದಾನ ಮಾಡಬೇಕು. ಪ್ರತಿಯೊಬ್ಬ ವಯಸ್ಕ ನಾಗರಿಕ ಮತದಾರ ಪಟ್ಟಿಯಲ್ಲಿ ಸೇರ್ಪಡೆಯಾಗಿ ಮತದಾರ ಚೀಟಿ ಹೊಂದುವಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯ ಎಂದರು.

    ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್. ಚಿಣ್ಣನ್ನವರ, ಜಿಪಂ ಸಿಇಒ ಡಾ. ಬಿ. ಸುಶೀಲಾ ಮಾತನಾಡಿದರು. ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕವಿವಿ ಕುಲಸಚಿವ ಕೆ.ಟಿ. ಹನುಮಂತಪ್ಪ, ಇತರರು ಇದ್ದರು. ರಾಷ್ಟ್ರೀಯ ಮತದಾರ ದಿನ ನಿಮಿತ್ತ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಹಾಗೂ ಉತ್ತಮವಾಗಿ ಮತದಾರ ನೋಂದಣಿ ಕಾರ್ಯ ನಡೆಸಿದ ಮತಗಟ್ಟೆ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

    ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಸ್ವಾಗತಿಸಿದರು. ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ .ಬಿ. ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ಕೆ.ಎಂ. ಶೇಖ್ ನಿರೂಪಿಸಿದರು. ತಹಸೀಲ್ದಾರ್ ಸಂತೋಷ ಬಿರಾದಾರ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts