More

    ಹಡಪದ ಅಪ್ಪಣ್ಣ ವಚನಗಳು ಮನುಕುಲಕ್ಕೆ ದಾರಿದೀಪ

    ಪಾಂಡವಪುರ: ಹಡಪದ ಅಪ್ಪಣ್ಣ ಅವರ ವಚನ ಸಾಹಿತ್ಯ ಸರ್ವಕಾಲಿಕ ಸತ್ಯವಾಗಿದ್ದು, ಮನುಕುಲವನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಹೊಂದಿದೆ ಎಂದು ಸವಿತಾ ಸಮಾಜದ ಜಿಲ್ಲಾಧ್ಯಕ್ಷ ರವಿಕುಮಾರ್ ಹೇಳಿದರು.
    ಇಲ್ಲಿನ ರೈಲ್ವೆ ನಿಲ್ದಾಣದ ವೃತ್ತದಲ್ಲಿ ತಾಲೂಕು ಸವಿತಾ ಸಮಾಜ ಕೆನ್ನಾಳು ಘಟಕದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾಗಿ ಬದುಕಿದ್ದ ಅಪ್ಪಣ್ಣ ತಮ್ಮ ವಚನ ಸಾಹಿತ್ಯದ ಮೂಲಕ ಅನೇಕ ವಿಚಾರಗಳನ್ನು ತಿಳಿಸಿದ್ದಾರೆ. ಈ ವಚನಗಳು ಮನುಕುಲಕ್ಕೆ ದಾರಿದೀಪವಾಗಿವೆ. ಮಹಾಪುರುಷರ ಜಯಂತಿಗಳನ್ನು ಆಚರಣೆ ಮಾಡಿದರೆ ಸಾಲದು, ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದು ಆದರ್ಶಗಳನ್ನು ಮೈಗೂಡಿಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ ಎಂದರು.
    ಪಾಂಡವಪುರ ಪಟ್ಟಣದಲ್ಲಿ ಸವಿತಾ ಸಮಾಜದ ಭವನ ನಿರ್ಮಾಣಕ್ಕೆ 10 ಗುಂಟೆ ಜಾಗವಿದ್ದರೂ ಹಣದ ಕೊರತೆ ಇದೆ. ಹೀಗಾಗಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಸಚಿವ ಚಲುವರಾಯಸ್ವಾಮಿ ಅವರ ಬಳಿ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಮಂಜೂರು ಮಾಡಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಭವನ ನಿರ್ಮಾಣಕ್ಕೆ ಸಮಾಜದ ಮುಖಂಡರು ಹೋರಾಟ ಮಾಡಬೇಕು ಎಂದು ಸಲಹೆ ನೀಡಿದರು.
    ಸವಿತಾ ಸಮಾಜ ಕೆನ್ನಾಳು ಘಟಕದ ಅಧ್ಯಕ್ಷ ಡಾ.ಮಡಹಳ್ಳಿ ಶಿವಕುಮಾರ್, ತಾಲೂಕು ಅಧ್ಯಕ್ಷ ನಂದೀಶ್, ಕಾರ್ಯದರ್ಶಿ ಶಶಿಧರ್, ಉಪಾಧ್ಯಕ್ಷ ಮಹೇಶ್, ರವಿ, ಕಿರಣ್, ಯೋಗೇಶ್, ಬಸವರಾಜು, ವೆಂಕಟೇಶ್, ರಾಜೇಶ್, ಸಿದ್ದು, ಮನು, ಸ್ವಾಮಣ್ಣ, ಕುಮಾರ್, ತಿಮ್ಮರಾಜು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts