More

    ಹಣ ಕೇಳಿದರೆ ಕ್ರಮದ ಎಚ್ಚರಿಕೆ

    ಆಲಮೇಲ: ಗೃಹಲಕ್ಷ್ಮೀ ಯೋಜನೆ ನೋಂದಣಿಯ ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಣಿ ಸಲುವಾಗಿ ಯಾರಿಗೂ ಹಣ ಕೇಳುವಂತಿಲ್ಲ. ಒಂದು ವೇಳೆ ಯಾರಾದರೂ ಹಣ ಕೇಳಿದರೆ ತಕ್ಷಣ ತಹಸೀಲ್ದಾರ್ ಕಚೇರಿ ಸಂಪರ್ಕಿಸಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಲಮೇಲ ತಹಸೀಲ್ದಾರ್ ಸುರೇಶ ಚಾವಲರ್ ಹೇಳಿದರು.

    ಸ್ಥಳೀಯ ಪಟ್ಟಣ ಪಂಚಾಯಿತಿಯಲ್ಲಿನ ಗೃಹಲಕ್ಷ್ಮೀ ಯೋಜನೆ ನೋಂದಣಿಯ ಗ್ರಾಮ ಒನ್ ಕೇಂದ್ರಕ್ಕೆ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿ ಮಹಿಳೆಯರೊಂದಿಗೆ ಚರ್ಚಿಸಿ ಅವರು ಮಾತನಾಡಿದರು.

    ಆಲಮೇಲ ತಾಲೂಕಿನಾದ್ಯಂತ ಎಲ್ಲ ಗೃಹಲಕ್ಷ್ಮೀ ಯೋಜನೆ ನೋಂದಣಿಯ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಲಾಗಿದೆ. ಖಾಸಗಿ ಕಂಪ್ಯೂಟರ್ ಸೆಂಟರ್‌ಗಳಲ್ಲಿ ಗೃಹಲಕ್ಷ್ಮೀ ಯೋಜನೆ ನೋಂದಣಿ ಮಾಡಿಕೊಡಲಾಗುವುದು ಎಂದು ಹಣ ಪಡೆದು ಸಾರ್ವಜನಿಕರಿಗೆ ಮೋಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸದ್ಯ ಅಂತಹ ಖಾಸಗಿ ಕಂಪ್ಯೂಟರ್ ಸೆಂಟರ್‌ಗಳ ಮೇಲೆ ದಾಳಿ ಮಾಡಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದರು.

    ಗ್ರಾಮ ಒನ್ ಕೇಂದ್ರಗಳ ಸಿಬ್ಬಂದಿ ಮಹಿಳೆಯರೊಂದಿಗೆ ಸರಿಯಾಗಿ ವರ್ತಿಸಿ ಸೂಕ್ತ ಮಾಹಿತಿ ಪಡೆದುಕೊಳ್ಳಬೇಕು. ಒಂದು ವೇಳೆ ಅಸಭ್ಯ ವರ್ತನೆ ಅಥವಾ ಹಣ ಪಡೆಯುವ ಕುರಿತು ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

    ಪಪಂ ಮುಖ್ಯಾಧಿಕಾರಿ ಜಿ.ವಿ. ಹಣ್ಣಿಕೇರಿ ಮಾತನಾಡಿ, ನಮ್ಮ ಕಾರ್ಯಾಲಯದಲ್ಲಿ ಆರಂಭಿಸಿರುವ ಗೃಹಲಕ್ಷ್ಮೀ ಯೋಜನೆ ನೋಂದಣಿಯ ಗ್ರಾಮ ಒನ್ ಕೇಂದ್ರಗಳಲ್ಲಿ ಸರ್ವರ್ ಸಮಸ್ಯೆ ಆಗುತ್ತಿದೆ. ಇದನ್ನು ಹೊರತು ಪಡಿಸಿ ಬೇರೆ ಯಾವುದೇ ಸಮಸ್ಯೆ ಇಲ್ಲ. ಅದಕ್ಕಾಗಿ ಸಾರ್ವಜನಿಕರು ಸಹಕರಿಸಬೇಕು ಎಂದರು.

    ಪಪಂ ಸಿಬ್ಬಂದಿ ಬಿ.ಜಿ. ನಾರಾಯಣಕರ, ವೀರೇಶ ಮೋರಟಗಿ, ಪ್ರದೀಪ ದಳವೆ, ಗಂಗಾರಾಮ ರಜಪೂತ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts