More

    ಹತ್ಯೆ ಪ್ರಕರಣ ಸಿಬಿಐಗೆ ವಹಿಸಿ

    ಗದಗ: ಶಿವಮೊಗ್ಗದಲ್ಲಿ ಹಿಂದು ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣವನ್ನು ಎನ್​ಐಎ ಹಾಗೂ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ವಿಶ್ವಹಿಂದು ಪರಿಷತ್ ಹಾಗೂ ಭಜರಂಗ ದಳ ಗದಗ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿದರು.
    ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೂ ಹಿಂದುಗಳ ರಕ್ಷಣೆಯಾಗುತ್ತಿಲ್ಲ. ದುಷ್ಕೃತ್ಯಗಳಿಗೆ ಬೆಂಬಲವಾಗಿ ನಿಲ್ಲುವ, ಸಮಾಜದಲ್ಲಿ ಶಾಂತಿ ಕದಡಲು ಕಾರಣವಾಗುತ್ತಿರುವ ಎಸ್​ಡಿಪಿಐ, ಪಿಎಫ್​ಐನಂತಹ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು. ಅಲ್ಲದೆ, ಸೂಕ್ತ ತನಿಖೆಯ ಮೂಲಕ ಈ ಹತ್ಯೆಯ ಹಿಂದಿನ ಸಂಚುಕೋರರನ್ನು ಬಯಲಿಗೆಳೆಯಬೇಕು. ಹತ್ಯೆಯಾದ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು. ಹಿಂದು ಕಾರ್ಯಕರ್ತರಿಗೆ, ನಾಯಕರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
    ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಮಹೇಶ ರೋಖಡೆ, ಹುಲಗಪ್ಪ ವಾಲ್ಮೀಕಿ, ಬಸವರಾಜ ಕುರ್ತಕೋಟಿ, ಸೋಮು ಗುಡಿ, ರವಿ ಮುಕ್ಕಣ್ಣವರ, ಅಶೋಕ ಭಜಂತ್ರಿ, ರಮೇಶ ವಾಲ್ಮೀಕಿ, ಶಿವಯೋಗಿ ಹಿರೇಮಠ, ಸತೀಶ ಕುಮಾರ, ಸುರೇಶ ಸೋಮನಕಟ್ಟಿ, ನಾಗರಾಜ ದೊಡ್ಮನಿ, ಸಂಜು ಶೆಟ್ಟಿ, ಪ್ರಮೋದ ರಜಪೂತ, ರಾಮು ಕಾಂಬಳೆಕರ್, ಮಂಜು ಮೇಳ್ಳನವರ ಮತ್ತಿತರರು ಇದ್ದರು.
    ಮರಣ ದಂಡನೆ ವಿಧಿಸಲಿ: ಹರ್ಷ ಅವರನ್ನು ಹತ್ಯೆಗೈದವರಿಗೆ ಮರಣ ದಂಡನೆ ಶಿಕ್ಷೆ ವಿಧಿಸಬೇಕು ಎಂದು ಮರಾಠಾ ವಿದ್ಯಾವರ್ಧಕ ಸಂಘದಿಂದ ಬುಧವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
    ಗೃಹ ಸಚಿವರ ಜಿಲ್ಲೆಯಲ್ಲೇ ಹಿಂದು ಕಾರ್ಯಕರ್ತನ ಹತ್ಯೆಯಾಗಿರುವುದು ಗಮೆ ಮೂಡಿಸುತ್ತಿದೆ. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
    ಭಾವಸಾರ ಕ್ಷತ್ರೀಯ ಸಮಾಜ: ಹಿಂದುತ್ವಕ್ಕಾಗಿ ಧ್ವನಿ ಎತ್ತುತ್ತಿದ್ದ ಎಂಬ ಕಾರಣಕ್ಕೆ ಶಿವಮೊಗ್ಗದಲ್ಲಿ ಹರ್ಷ ಝಿಂಗಾಡೆ ಎಂಬಾತನನ್ನು ಹತ್ಯೆ ಮಾಡಿರುವುದು ಖಂಡನೀಯ ಎಂದು ಭಾವಸಾರ ಕ್ಷತ್ರೀಯ ಸಮಾಜದಿಂದ ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts