More

    ಹರ್ಷ ಹತ್ಯೆಗೆ ಸಿಡಿದ ಹಿಂದು ಸಮಾಜ

    ಕಲಬುರಗಿ: ಶಿವಮೊಗ್ಗದಲ್ಲಿ ಬಜರಂಗ ದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ಸಿಡಿದೆದ್ದ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗ ದಳ ಕಾರ್ಯಕರ್ತರು ನಗರ ಸೇರಿ ಜಿಲ್ಲೆಯ ವಿವಿಧೆಡೆ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

    ಜಗತ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿ ದುಷ್ಟ ಶಕ್ತಿಗಳನ್ನು ನಿಗ್ರಹಿಸುವಂತೆ ಒತ್ತಾಯಿಸಿದರು. ಮೆರವಣಿಗೆಯಲ್ಲಿ ರಾರಾಜಿಸಿದ 200 ಮೀಟರ್‌ಗೂ ಅಧಿಕ ಉದ್ದದ ಭಗವಾ ಧ್ವಜ ಗಮನ ಸೆಳೆಯಿತು.

    ಹರ್ಷ ಹತ್ಯೆ ಪ್ರಕರಣದ ತನಿಖೆ ಹೊಣೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಥವಾ ಕೇಂದ್ರೀಯ ತನಿಖಾ ದಳ (ಸಿಬಿಐ)ಗೆ ವಹಿಸಬೇಕು. ದೇಶದ್ರೋಹಿ ಸಂಘಟನೆಗಳಾದ ಪಿಎಫ್‌ಐ, ಎಸ್‌ಡಿಪಿಐ ನಿಷೇಧಿಸಬೇಕು. ಧರ್ಮ ರಕ್ಷಣೆಗೆ ಬದುಕು ಮುಡಿಪಾಗಿಟ್ಟು ಸಮಾಜಕ್ಕೆ ಸಮರ್ಪಿಸಿ ಬಜರಂಗದಳದ ಸಕ್ರಿಯ ಕಾರ್ಯಕರ್ತನ ಹತ್ಯೆಯನ್ನು ಉಗ್ರವಾಗಿ ಖಂಡಿಸಿದರು. ಹಂತಕರು ಹಿಂದು ಕಾರ್ಯಕರ್ತರನ್ನೇ ಗುರಿಯಾಗಿ ಕೃತ್ಯ ನಡೆಸುತ್ತಿರುವುದು ಸಮಾಜಕ್ಕೆ ಎಚ್ಚರಿಕೆ ಗಂಟೆಯಾಗಿದೆ. ಪರಿಸ್ಥಿತಿಯ ಸೂಕ್ಷ್ಮತೆ ಅರಿಯದೆ ಹೋದರೆ ದೇಶಕ್ಕೆ ಗಂಡಾಂತರ ಕಟ್ಟಿಟ್ಟ ಬುತ್ತಿ. ಕೂಡಲೇ ಸರ್ಕಾರ ಎಚ್ಚೆತ್ತು ಕೊಲೆಗಡುಕರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಮೃತ ಹರ್ಷ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

    ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ್, ವಿಎಚ್‌ಪಿ ಪ್ರಮುಖರಾದ ಶೇಷಾದ್ರಿ ಕುಲಕರ್ಣಿ, ಶ್ರೀಮಂತ (ರಾಜು) ನವಲದಿ, ಪ್ರಶಾಂತ ಗುಡ್ಡ, ಶಿವರಾಜ ಸಂಗೋಳಗಿ, ಅಶ್ವಿನಕುಮಾರ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್, ಪ್ರಮುಖರಾದ ದಿವ್ಯಾ ಹಾಗರಗಿ, ವಿರೇಶಗೌಡ ಪಾಟೀಲ್, ಸತೀಶ, ಋಷಿಕೇಶ, ವಿನಯ ಕುಲಕರ್ಣಿ, ರಾಘವೇಂದ್ರ ಮೊದಲಾದವರು ಪಾಲ್ಗೊಂಡಿದ್ದರು. ಸ್ಥಳಕ್ಕೆ ಬಂದ ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಮನವಿ ಸ್ವೀಕರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts