More

    ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಿ

    ಗದಗ: ಜಿಲ್ಲೆಯಲ್ಲಿ ಆಗಸ್ಟ್ 15ರಂದು ಸ್ವಾತಂತ್ರೋತ್ಸವ ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಪ್ರಭಾರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಸೂಚಿಸಿದರು.

    ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಸ್ವಾತಂತ್ರ್ಯೊತ್ಸವ ಆಚರಣೆ ಕುರಿತು ಶುಕ್ರವಾರ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಆಗಸ್ಟ್ 14 ಹಾಗೂ 15 ರಂದು ಎರಡು ದಿವಸಗಳ ಕಾಲ ಜಿಲ್ಲಾಡಳಿತ ಭವನದ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳು, ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು. ಜಿಲ್ಲಾಡಳಿತ ಭವನ ಹಾಗೂ ಭೀಷ್ಮ ಕೆರೆ ಆವರಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸ್ವಾತಂತ್ರ್ಯೊತ್ಸವ ಶುಭಾಶಯ ಸಾರುವ ಪರಿಸರ ಸ್ನೇಹಿ ಬ್ಯಾನರ್ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಆಗಸ್ಟ್ 15ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ಕಾರ್ಯಕ್ರಮ, ಬೆಳಗ್ಗೆ 9 ಗಂಟೆಗೆ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ ಎಂದರು.

    ನಗರದ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಪ್ರಮುಖ ಬೀದಿ ಹಾಗೂ ವೃತ್ತಗಳ ಸ್ವಚ್ಛತೆ ಕುರಿತು ನಗರಸಭೆ ಆಯುಕ್ತರು ಕ್ರಮ ವಹಿಸಬೇಕು ಎಂದರು.

    ಸಭೆಯಲ್ಲಿ ಆಮಂತ್ರಣ ಪತ್ರಿಕೆ ಮುದ್ರಣ, ಧ್ವನಿವರ್ಧಕ ಸೇರಿದಂತೆ ಕಾರ್ಯಕ್ರಮದ ವೇದಿಕೆ ವ್ಯವಸ್ಥೆ, ಆಯಾ ಇಲಾಖೆಗಳ ಸ್ತಬ್ಧ ಚಿತ್ರಗಳ ಪ್ರದರ್ಶನ, ಪರೇಡ್ ಕುರಿತು ರ್ಚಚಿಸಲಾಯಿತು.

    ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ ನುಚ್ಚಿನ್, ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ ಕೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಕಾರ್ವಿುಕ ಇಲಾಖೆಯ ಅಧಿಕಾರಿ ಸುಧಾ ಗರಗ, ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts