More

    ಹಳ್ಳಿಖೇಡ(ಬಿ) ಪುರಸಭೆಗೆ 20 ಕೋಟಿ ರೂ. ಒದಗಿಸಿ

    ಹುಮನಾಬಾದ್: ಹಳ್ಳಿಖೇಡ(ಬಿ) ನೂತನ ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಮೂಲ ಸೌಲಭ್ಯಗಳನ್ನು ಒದಗಿಸಲು ಹೆಚ್ಚುವರಿಯಾಗಿ 20 ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡುವಂತೆ ಶಾಸಕ ರಾಜಶೇಖರ ಪಾಟೀಲ್ ಸಿಎಂಗೆ ಮನವಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಾಸಕ ಪಾಟೀಲ್ ನೇತೃತ್ವದಲ್ಲಿ ಪುರಸಭೆ ಅಧ್ಯಕ್ಷ ನಾಗರಾಜ ಹಿಬಾರೆ ಹಾಗೂ ಸದಸ್ಯರು ಮನವಿ ಪತ್ರ ಸಲ್ಲಿಸಿ, ಹುಮನಾಬಾದ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಳ್ಳಿಖೇಡ(ಬಿ) ಗ್ರಾಪಂನಿಂದ ಪುರಸಭೆಯಾಗಿ ಕಳೆದ 4 ವರ್ಷಗಳ ಹಿಂದೆ ಮೇಲ್ದಜರ್ೆಗೇರಿಸಲಾಗಿದೆ. ಆದರೆ ಇಲ್ಲಿಯವರೆಗೂ ಪುರಸಭೆ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲು ವಿಶೇಷ ಅನುದಾನ ಮಂಜೂರಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.

    ಪುರಸಭೆ ವ್ಯಾಪ್ತಿಯಲ್ಲಿ 50 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದ್ದು, ಸಾರ್ವಜನಿಕರಿಗೆ ಗ್ರಂಥಾಲಯ, ರಸ್ತೆ, ಒಳಚರಂಡಿ, ಶುದ್ಧ ಕುಡಿಯುವ ನೀರಿನ ಸೌಲಭ್ಯ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದು ಅವಶ್ಯಕವಾಗಿರುತ್ತದೆ. ಆದ್ದರಿಂದ ವಿಶೇಷ ಅನುದಾನ ಮಂಜೂರು ಮಾಡುವಂತೆ ಆದೇಶಿಸಿಸಲು ಮನವಿ ಮಾಡಿದ್ದಾರೆ.

    ಪುರಸಭೆ ಸದಸ್ಯರಾದ ಸಾಜೀದ್ ಪಟೇಲ್, ಮಲ್ಲಿಕಾಜರ್ುನ ಪ್ರಭಾ, ಯೂಸೂಫ್ ಸೌದಾಗರ್, ರಾಜು ಶಂಕೆ, ಆರೀಫ್ ಬಾವಗಿ, ಚಾಂದ್ ಖುರೇಶಿ, ಗೌಸ್ ರಾಜೇಭಯಿ, ಪುರಸಭೆ ಮಾಜಿ ಸದಸ್ಯ ಸಂದೀಪ್ ಪ್ರಭಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts