More

    ಹಳ್ಳಿಗಳಲ್ಲಿ ಕುಡಿಯುವ ನೀರಿನ ತೊಂದರೆ ನೀಗಿಸಿ

    ಯಾದಗಿರಿ: ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ತ್ವರಿತವಾಗಿ ನೀರು ಪೂರೈಕೆ ಮಾಡಲು ಸಂಬಂಸಿದ ಅಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ನೂತನ ಜಿಲ್ಲಾಕಾರಿ ಡಾ.ಸುಶೀಲಾ ಬಿ., ನಿದರ್ೇಶನ ನೀಡಿದ್ದಾರೆ.

    ಜಿಲ್ಲಾಕಾರಿಯಾಗಿ ಅಕಾರ ಸ್ವೀಕರಿಸಿದ ನಂತರ ಬುಧವಾರ ಸಂಜೆ ಇಲ್ಲಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಕಾರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ 6 ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ 31 ಸಮಸ್ಯಾತ್ಮಕ ಗ್ರಾಮಗಳಿವೆ. ಮಳೆ ಸುರಿಯುತ್ತಿರುವ ಕಾರಣ ಗ್ರಾಮಸ್ಥರಿಗೆ ನೀರಿನ ತೊಂದರೆ ಎದುರಾಗದಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಕಾರಿಗಳು ಗಮನ ಹರಿಸಬೇಕು ಎಂದರು.

    ಹತ್ತು ದಿನಗಳ ಒಳಗಾಗಿ ಈ ಗ್ರಾಮಗಳಿಗೆ ಅಕಾರಿಗಳು ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಪರಿಹಾರಕ್ಕಾಗಿ ಏನೆಲ್ಲ ಕ್ರಮ ಕೈಗೊಳ್ಳಬಹುದು ಎಂಬ ವರದಿ ನೀಡಬೇಕು. ಕೆಳ ಹಂತದ ಅಕಾರಿಗಳ ಮೇಲೆ ಅವಲಂಬನೆಯಾಗಕೂಡದು. ಜಿಲ್ಲೆಯಲ್ಲಿ ಆಸರ್ೆನಿಕ್, ಪ್ಲೋರೈಡ್ಯುಕ್ತ ಜಲಮೂಲಗಳನ್ನು ಗುರುತಿಸಿ ಜನರಲ್ಲಿ ಸೂಕ್ತ ಅರಿವು ಮೂಡಿಸಬೇಕು. ನೀರು ಪೂರೈಕೆ ಮಾಡುವ ಪೈಪ್ಗಳಲ್ಲಿ ಚರಂಡಿ ನೀರದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದರು.

    ಕುಡಿಯುವ ನೀರಿಗೆ ಸಂಬಂಸಿದಂತೆ ಬಾಕಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ವಿಶೇಷ ಗಮನ ಹರಿಸಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಬಗ್ಗೆ ಸೂಕ್ತ ನಿಗಾ ವಹಿಸಬೇಕು. ಗುರುಮಠಕಲ್ ಪುರಸಭೆ ವ್ಯಾಪ್ತಿಯಲ್ಲಿ ನೀರು ಸರಬರಾಜು ಯೋಜನೆಯಡಿ ಸಮರ್ಪಕ ವಿದ್ಯುತ್ ಪೂರೈಕೆ ಕುರಿತಂತೆ ಈಗಾಗಲೇ ಕೆಕೆಆರ್ಡಿಬಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಆದಾಗಿಯೂ ಜೆಸ್ಕಾಂ ಅಕಾರಿಗಳು ಪರಸ್ಪರ ಸಮನ್ವಯತೆಯಿಂದ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ಷೇತ್ರ ಮಟ್ಟದಲ್ಲಿ ಭೇಟಿ ನೀಡಿ ಪರಿಶೀಲಿಸಿ ಎಂದರು.

    ಕಳೆದ ಬಾರಿ ಪ್ರವಾಹದಿಂದ ಸಮಸ್ಯೆ ಎದುರಿಸಿದ ಜಿಲ್ಲೆಯ 80 ಗ್ರಾಮಗಳು ಬಗ್ಗೆ ಸೂಕ್ತ ನಿಗಾ ಇಡಬೇಕು. ಆಯಾ ತಾಲೂಕಿನ ತಹಸೀಲ್ದಾರರಿಗೆ ಬಿಡುಗಡೆ ಮಾಡಿರುವ ಅನುದಾನದಿಂದ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಪರಿಹಾರ ಪಾವತಿ ಮಾಡುವುದು, ಕಚೇರಿಯಲ್ಲಿ ತುತರ್ು ವಿಪತ್ತು ನಿರ್ವಹಣೆಗಾಗಿ ಕಂಟ್ರೋಲ್ ರೂಮ್ ತೆರೆದು 24 ಗಂಟೆಯೂ ಕಾರ್ಯ ನಿರ್ವಹಿಸಲು ಸಿಬ್ಬಂದಿ ನಿಯೋಜಿಸಬೇಕು ಎಂದು ಹೇಳಿದರು.

    ರೈತರಿಗೆ ನೀಡಲಾದ ಇನ್ಪುಟ್ ಸಬ್ಸಿಡಿ ವಿತರಣೆ ಕುರಿತಂತೆ ಹಾಗೂ ಪಶುಸಂಗೋಪನ ಇಲಾಖೆ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಲಭ್ಯವಿರುವ ಮೇವಿನ ಕುರಿತು ಅವಶ್ಯಕ ಮಾಹಿತಿ ಪಡೆದ ಅವರು, ನಾರಾಯಣಪುರ ಜಲಾಶಯ, ಸನ್ನತಿ ಬ್ಯಾರೇಜ್ಗಳಿಂದ ಬಿಡಲಾಗಿರುವ ನೀರಿನ ಪ್ರಮಾಣ ಸೇರಿ ಇನ್ನಿತರ ವಿಷಯಗಳ ಬಗ್ಗೆ ಪರಿಶೀಲನೆ ನಡೆಸಿದರು.

    ಜಿಪಂ ಸಿಇಒ ಗರೀಮಾ ಪನ್ವಾರ, ಅಪರ ಜಿಲ್ಲಾಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ನಗರಸಭೆ ಪೌರಾಯುಕ್ತ ಸಂಗಪ್ಪ ಉಪಾಸೆ ,ಕೃಷಿ ಜಂಟಿ ನಿದರ್ೇಶಕರು ಅಬೀದ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts