More

    ಹುಷಾರ್​, ಹಾಸನದ ಲೈಂಗಿಕ ಕಿರುಕುಳ ವಿಡಿಯೋ ಶೇರ್​ ಮಾಡದಿರಿ.. ಎಸ್‌ಐಟಿ ಹೇಳುತ್ತಿರುವುದೇನು?

    ಬೆಂಗಳೂರು: ಹಾಸನದ ಲೈಂಗಿಕ ಕಿರುಕುಳ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ವಿಶೇಷ ತನಿಖಾ ತಂಡ (ಎಸ್ ಐಟಿ) ಮುಖ್ಯಸ್ಥ ಬಿ.ಕೆ.ಸಿಂಗ್ ತಿಳಿಸಿದ್ದಾರೆ.

    ಇದನ್ನೂ ಓದಿ: ‘ಕಾಂಗ್ರೆಸ್​ನಿಂದ ಹಿಂದೂ- ಮುಸ್ಲಿಮರ ನಡುವೆ ಒಡಕು ಮೂಡಿಸಲು ಯತ್ನ’: ರಾಜನಾಥ್ ಸಿಂಗ್

    ಈ ಬಗ್ಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಬಾರದು. ಈ ರೀತಿ ಶೇರ್​ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದರು.

    ಈ ಪ್ರಕರಣದ ಯಾವುದೇ ಸಂತ್ರಸ್ತರು ಈಗಾಗಲೇ ಆರಂಭಿಸಲಾಗಿರುವ ನಮ್ಮ ಸಹಾಯವಾಣಿ ನಂಬರ್ 63609 38947 ಗೆ ಬೆಳಗ್ಗೆ 8 ರಿಂದ ರಾತ್ರಿ 8ಗಂಟೆ ನಡುವೆ ಕರೆ ಮಾಡಬಹುದು. ನಮಗೆ ಕರೆ ಮಾಡುವ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವಿಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.

    ಪತ್ನಿ ಅಗತ್ಯತೆಗಾಗಿ ಬೆಳ್ಳಂಬೆಳಗ್ಗೆ ಹೀಗೊಂದು ಪತ್ರ..ಪತಿ ಕರಣ್ ಬಗ್ಗೆ ಸುರಭಿ ಹೇಳಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts