More

    ಹಸು ತಿಂದು ಹಾಕಿದ ಚಿರತೆ : ಹುಣಸಿಕಟ್ಟೆ ಗ್ರಾಮದ ಸುತ್ತಲೂ ಭಯದ ವಾತಾವರಣ

    ರಾಣೆಬೆನ್ನೂರ: ಚಿರತೆ ದಾಳಿ ನಡೆಸಿ ಹಸುವೊಂದನ್ನು ತಿಂದು ಹಾಕಿರುವ ಘಟನೆ ತಾಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ನಡೆದಿದ್ದು, ಘಟನೆಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

    ಗ್ರಾಮದ ಆಂಜನೇಯ ಓಲೇಕಾರ ಎಂಬುವರಿಗೆ ಸೇರಿದ ಕುರಿ ಫಾರ್ಮ್‌ಗೆ ನುಗ್ಗಿದ ಚಿರತೆ ಪಕ್ಕದಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ನಡೆಸಿ ತಿಂದು ಹಾಕಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಫಾರ್ಮ್‌ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಕಳೆದ ಕೆಲವು ದಿನಗಳಿಂದ ಚಿರತೆ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಇದೀಗ ಪ್ರತ್ಯಕ್ಷವಾಗಿ ಸಿಸಿ ಟಿವಿ ಸೆರೆಯಾದ್ದರಿಂದ ಹುಣಸಿಕಟ್ಟೆ ಸೇರಿ ಸುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಮನೆ ಮಾಡಿದೆ. ರೈತರು ಕೃಷಿ ಕೆಲಸಕ್ಕಾಗಿ ಜಮೀನುಗಳಿಗೆ ತೆರಳುವುದನ್ನು ಬಿಟ್ಟಿದ್ದಾರೆ. ಆದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಬೋನ್ ಇಟ್ಟು ಚಿರತೆ ಸೆರೆ ಹಿಡಿಯಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

    ಹುಣಸಿಕಟ್ಟಿ ಬಳಿ ಹಸುವಿನ ಮೇಲೆ ಚಿರತೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಚಿರತೆ ಹಿಡಿಯಲು ಮೇಲಾಧಿಕಾರಿಗಳೊಂದಿಗೆ ಮಾತನಾಡಿ ಬೋನ್ ಇಡಲಾಗುವುದು ಎಂದು ಉಪವಲಯ ಅರಣ್ಯಾಧಿಕಾರಿ ರಾಜು ಪೂಜಾರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts