More

    ಹಾಲು ಖರೀದಿ ದರ ಹೆಚ್ಚಳ ಮಾಡಿದ ಶಿಮುಲ್: ಆ.11ರಿಂದ ಪ್ರತಿ ಲೀಟರ್‌ಗೆ ಒಂದು ರೂ. ಹೆಚ್ಚಳ

    ಶಿವಮೊಗ್ಗ: ಹಾಲು ಉತ್ಪಾದಕರಿಗೆ ಶಿಮುಲ್ ಶ್ರಾವಣ ಮಾಸದ ವಿಶೇಷ ಕೊಡುಗೆ ಘೋಷಿಸಿದೆ. ಆ.11ರಿಂದ ಹಾಲಿನ ಖರೀದಿ ದರ ಹೆಚ್ಚಳ ಮಾಡಲಾಗಿದ್ದು, ಪ್ರತಿ ಲೀಟರ್ ಹಾಲಿಗೆ ಒಂದು ರೂ. ಹೆಚ್ಚಳ ಮಾಡಿದೆ. ಇದರಿಂದ ರೈತರಿಗೆ ಒಕ್ಕೂಟದಿಂದ ಪ್ರತಿ ಲೀಟರ್‌ಗೆ 28.20 ರೂ. ಸಿಗಲಿದೆ. ಸರ್ಕಾರದ ಪ್ರೋತ್ಸಾಹ ಧನ ಐದು ರೂ. ಸೇರಿ ಒಟ್ಟು 33.20 ರೂ. ಹಾಲು ಉತ್ಪಾದಕರಿಗೆ ಸಿಗಲಿದೆ.
    ಆಡಳಿತ ಕಚೇರಿಯಲ್ಲಿ ಸೋಮವಾರ ಒಕ್ಕೂಟದ 421ನೇ ಆಡಳಿತ ಮಂಡಳಿ ಸಭೆ ನಡೆಸಿದ ಬಳಿಕ ಅಧ್ಯಕ್ಷ ಎನ್.ಎಚ್.ಶ್ರೀಪಾದ ರಾವ್ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ನೀಡಿದರು.
    ಆರ್ಥಿಕ ಪರಿಸ್ಥಿತಿ ಅವಲೋಕಿಸಿ ಶಿಮುಲ್ ಹಾಲು ಖರೀದಿ ದರವನ್ನು ಕಾಲ ಕಾಲಕ್ಕೆ ಪರಿಷ್ಕರಿಸುತ್ತಾ ಬಂದಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಪ್ರಗತಿಯಾಗಿದ್ದು, ಖರೀದಿ ದರ ಒಂದು ರೂ. ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.
    ಒಕ್ಕೂಟದ ವ್ಯಾಪ್ತಿಯಲ್ಲಿ 1,347 ಸಹಕಾರ ಸಂಘಗಳಿದ್ದು ಪ್ರತಿ ದಿನ 7 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಅಂತಾರಾಜ್ಯ ಮಟ್ಟದಲ್ಲೂ ಹಾಲಿನ ಮಾರಾಟ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts