More

    ಹಾಳಕುಸುಗಲ್​ನಲ್ಲಿ ಔಷಧ ಸಿಂಪಡಣೆ

    ಧಾರವಾಡ: ಕರೊನಾ ವೈರಸ್ ಹರಡದಂತೆ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ನವಲಗುಂದ ತಾಲೂಕಿನ ಹಾಳಕುಸುಗಲ್ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಮಂಗಳವಾರ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಲಾಯಿತು.

    ಗ್ರಾಮದ ಜನರಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದಿರಲಿ ಎಂಬ ಕಾರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಊರಿನ ಗಟಾರಗಳನ್ನು ಸ್ವಚ್ಛಗೊಳಿಸಿ, ಪ್ರತಿ ಬಡಾವಣೆಗಳಲ್ಲೂ ಬ್ಲೀಚಿಂಗ್ ಪೌಡರ್ ಸಿಂಪಡಿಸಲಾಯಿತು.

    ದೇವಸ್ಥಾನ, ಪ್ರಮುಖ ಕಟ್ಟೆ, ಬಸ್ ನಿಲ್ದಾಣಗಳಲ್ಲಿ ಜನರು ಗುಂಪು ಗುಂಪಾಗಿ ಸೇರಿದಂತೆ ಕ್ರಮಕೈಗೊಳ್ಳಲಾಗಿದೆ. ಗ್ರಾಪಂ ಅಧ್ಯಕ್ಷರು, ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಒಳಗೊಂಡ ಗ್ರಾಮ ಆರೋಗ್ಯ ಕಾರ್ಯಪಡೆ ಮನೆ ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

    ಕರೊನಾ ಸೋಂಕು ತಡೆಯಲು ಜನರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು, ರೋಗದ ಲಕ್ಷಣಗಳು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಬೇರೆ ರಾಜ್ಯಗಳಿಂದ ಬಂದ ವಲಸಿಗರ ಮನೆಗಳಿಗೆ ಭೇಟಿ ನೀಡಿ ಹೊರಗೆ ಬರದ ಹಾಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಲಾಗುತ್ತಿದೆ ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಂ.ಎಂ. ದಾನಪ್ಪಗೌಡರ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts