More

    ಹಾವೇರಿ ಜಿಲ್ಲೆಯಲ್ಲಿ 115 ಜನರಿಗೆ ಸೋಂಕು ದೃಢ

    ಹಾವೇರಿ: ಜಿಲ್ಲೆಯಲ್ಲಿ ಶನಿವಾರ 115 ಜನರಿಗೆ ಕರೊನಾ ದೃಢಪಟ್ಟಿದೆ. 34 ಜನರು ಗುಣವಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ ಎಂದು ಡಿಸ ಸಂಜಯ ಶೆಟ್ಟೆಣ್ಣನವರ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಈವರೆಗೆ 2,407 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇಂದಿನವರೆಗೆ 1,533 ಜನರು ಸೋಂಕಿನಿಂದ ಗುಣವಾಗಿ ಬಿಡುಗಡೆ ಹೊಂದಿದ್ದಾರೆ. 50 ಜನರು ಮೃತಪಟ್ಟಿದ್ದಾರೆ. ಒಟ್ಟು 824 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 406 ಸೋಂಕಿತರು ಹೋಂ ಐಸೋಲೇಷನ್​ನಲ್ಲಿ ಹಾಗೂ 418 ಸೋಂಕಿತರು ಕೋವಿಡ್ ಕೇರ್ ಆಸ್ಪತ್ರೆ, ಕೋವಿಡ್ ಕೇರ್ ಹೆಲ್ತ್ ಸೆಂಟರ್, ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಶನಿವಾರ ರಾಣೆಬೆನ್ನೂರ ತಾಲೂಕಿನಲ್ಲಿ 36, ಹಾವೇರಿ ತಾಲೂಕಿನಲ್ಲಿ 26, ಹಿರೇಕೆರೂರ ತಾಲೂಕಿನಲ್ಲಿ 16, ಶಿಗ್ಗಾಂವಿ ತಾಲೂಕಿನಲ್ಲಿ 13, ಬ್ಯಾಡಗಿ ತಾಲೂಕಿನಲ್ಲಿ 9, ಹಾನಗಲ್ಲ ತಾಲೂಕಿನಲ್ಲಿ 8, ಸವಣೂರ ತಾಲೂಕಿನಲ್ಲಿ 7 ಜನ ಸೇರಿ ಒಟ್ಟು 115 ಜನರಿಗೆ ಸೋಂಕು ದೃಢಪಟ್ಟಿದೆ. ಶಿಗ್ಗಾಂವಿ ತಾಲೂಕಿನ 10, ಸವಣೂರ ತಾಲೂಕಿನ 9, ಹಾನಗಲ್ಲ, ಹಿರೇಕೆರೂರ ತಾಲೂಕಿನ ತಲಾ 6, ಹಾವೇರಿ ತಾಲೂಕಿನ 3 ಜನ ಸೇರಿ ಒಟ್ಟು 34 ಜನ ಶನಿವಾರ ಬಿಡುಗಡೆಗೊಂಡಿದ್ದಾರೆ.

    ಒಬ್ಬ ಸಾವು: ಶಿಗ್ಗಾಂವಿ ತಾಲೂಕು ಹೋತನಹಳ್ಳಿಯ 50 ವರ್ಷದ ಪುರುಷ ತೀವ್ರ ಉಸಿರಾಟದ ತೊಂದರೆಯಿಂದ ಆ. 2ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ರ್ಯಾಪಿಡ್​ಆಂಟಿಜನ್ ಕಿಟ್ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಅಂದೇ ಮೃತಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts