More

    ಹಾಸನಾಂಬ ದೇವಾಲಯಕ್ಕೆ ಜಿಲ್ಲಾಧಿಕಾರಿ ಭೇಟಿ

    ಹಾಸನ: ನಗರದ ಅಧಿದೇವತೆ ಹಾಸನಾಂಬ ದೇವಾಲಯದ ಆವರಣಕ್ಕೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಆರ್.ಗಿರೀಶ್, ದರ್ಶನೋತ್ಸವದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.

    ಸಿದ್ದೇಶ್ವರಸ್ವಾಮಿ ದೇವಸ್ಥಾದ ಆವರಣದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ದರ್ಶನೋತ್ಸವದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಹಾಗೂ ವ್ಯವಸ್ಥೆಗಳ ಬಗ್ಗೆ ಸೂಚನೆ ನೀಡಿದರು.
    ಕರೊನಾ ಸೋಂಕು ಹರಡುತ್ತಿರುವ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ದೇವಸ್ಥಾನದ ಒಳಗಡೆ ದೇವಿಯ ದರ್ಶನ ಮಾಡಲು ಅನುಮತಿ ನೀಡಿಲ್ಲ. ಹೀಗಾಗಿ ದೇವಸ್ಥಾನದ ಆವರಣ ಹಾಗೂ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಎಲ್‌ಇಡಿ ಸ್ಕ್ರೀನ್ ಅಳವಡಿಸಲಾಗುತ್ತಿದೆ ಎಂದರು.

    ಸಾರ್ವಜನಿಕರು ದೇವಾಲಯದ ಹೊರ ಆವರಣಕ್ಕೆ ಬಂದರೆ ಜನಸಂದಣಿಯಾಗದಂತೆ ಬ್ಯಾರಿಕೇಡ್‌ಗಳನ್ನು ವ್ಯವಸ್ಥಿತವಾಗಿ ಅಳವಡಿಸಬೇಕು. ದೇವಸ್ಥಾನದ ಸುತ್ತಮುತ್ತ ಇರುವ ರಸ್ತೆಗಳಲ್ಲಿ ಕೆಲವನ್ನು ಏಕಮುಖ ಸಂಚಾರಕ್ಕೆ ಪರಿವರ್ತಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
    ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಎಲ್ಲವನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕು, ಲೈಟ್, ಸ್ಕ್ರೀನಿಂಗ್ ಗುಣಮಟ್ಟದಿಂದ ಕೂಡಿರಬೇಕು. ನಂತರ ದೇವಸ್ಥಾನದ ಸಂಪರ್ಕ ರಸ್ತೆಗಳ ವ್ಯವಸ್ಥೆ ಹಾಗೂ ಸಂತೇಪೇಟೆ ವೃತ್ತದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು.

    ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ಉಪವಿಭಾಗಾಧಿಕಾರಿ ಬಿ.ಎ ಜಗದೀಶ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಸಂಜಯ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕಅಭಿಯಂತರ ಎನ್.ಟಿ ಸುರೇಶ್ ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts