More

    ಹಾಸನ- ಪಿರಿಯಾಪಟ್ಟಣ ರಸ್ತೆ ಮಾರ್ಗದಲ್ಲಿ ಟೋಲ್ ಸಂಗ್ರಹ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

    ಅರಕಲಗೂಡು: ತಾಲೂಕಿನ ನಿಲುವಾಗಿಲು ಬಳಿ ಹಾಸನ- ಪಿರಿಯಾಪಟ್ಟಣ ರಸ್ತೆ ಮಾರ್ಗದಲ್ಲಿ ಟೋಲ್ ಸಂಗ್ರಹ ವಿರೋಧಿಸಿ ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕ ರು ರಸ್ತೆ ತಡೆದು ಸೋಮವಾರ ಭಾರಿ ಪ್ರತಿಭಟನೆ ನಡೆಸಿದರು.

    ರೈತ ಸಂಘ, ಕರವೇ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪ್ರಭಟನೆಯಲ್ಲಿ ಭಾಗವಹಿಸಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದರು.

    ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರೋಧಿಸಿ ಕಳೆದ ತಿಂಗಳು ಟೋಲ್ ವಸೂಲಿ ಮಾಡದಂತೆ ಪ್ರತಿಭಟನೆ ನಡೆಸಲಾಗಿತ್ತು. ಜಿಲ್ಲಾಧಿಕಾರಿಗಳ ಸಮ್ಮುದಲ್ಲಿ ಸಭೆ ನಡೆಸಿ ವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಸರಿಪಡಿಸುವ ತನಕ ಟೋಲ್ ವಸೂಲಿ ಕೈಬಿಲು ಸೂಚಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿಗಳ ಸೂಚನೆ ದಿಕ್ಕರಿಸಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
    ಶಾಸಕರು, ಅಧಿಕಾರಿಗಳು ಸ್ಥಳಕ್ಕೆ ಧಾವಿಸುತ್ತಿಲ್ಲ ಎಂದು ಪ್ರತಿಭಟನಾಕಾರರ ಆಕ್ರೊಶ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
    ಈ ರಸ್ತೆ ಹಾದುಹೋಗಿರುವ ಮಾರ್ಗ ಹಾಸನ, ಸಕಲೇಶಪುರ, ಪಿರಿಯಾಪಟ್ಟಣ , ಅರಕಲಗೂಡು ವ್ಯಾಪ್ತಿಯ ನಾಲ್ವರು ಶಾಸಕರಿಗೆ ಒಳಪಡುತ್ತದೆ. ಜನರಿಂದ ಆಯ್ಕೆಯಾದ ಶಾಸಕರು ಜನರು ನಡೆಸುತ್ತಿರುವ ಪ್ರತಿಭಟನೆ, ಮನವಿಗೆ ಬೆಲೆ ಕೊಡುತ್ತಿಲ್ಲ. ಆಮೀಷಕ್ಕೆ ಒಳಗಾಗಿ ಮತದಾರರಿಗೆ ಮೋಸ ಮಾಡುತ್ತಿದ್ದಾರೆ ಎಂದು ಪ್ರತಿಭಾನಾಕಾರರು ದೂರಿದರು.

    ರಸ್ತೆ ಕಾಮಗಾರಿಯನ್ನು ವೈಜ್ಞಾನಿಕವಾಗಿ ನಿರ್ಮಿಸುವ ವರೆಗೆ ಟೋಲ್ ಶುಲ್ಕ ವಸೂಲಿಗೆ ಅವಕಾಶ ನೀಡುವುದಿಲ್ಲ ಎಂದು ಕಿಡಿಕಾರಿದರು.
    ತಾಲೂಕು ರೈತ ಸಂಘದ ಅಧ್ಯಕ್ಷ ಯೋಗಣ್ಣ, ಪಪಂ ಮಾಜಿ ಸದಸ್ಯ ರವಿಕುಮಾರ್, ಕರವೇ ಮುಖಂಡ ಸೋಮಶೇಖರ್, ಜಿಪಂ ಮಾಜಿ ಸದಸ್ಯ ಎಚ್.ಎಸ್.‌ ಶಂಕರ್, ಕಾಂಗ್ರೆಸ್ ಮುಖಂಡ ಶೇಷೇಗೌಡ ಅವರು ಟೋಲ್ ವಸೂಲಿ ತಡೆಗಟ್ಟಲು ಮೀನಮೇಷ ಎಣಿಸುತ್ತಿರುವ ಶಾಸಕರು, ಅಧಿಕಾರಿಗಳ ವಿರುದ್ಧ ವಾಚಾಮಗೋಚರವಾಗಿ ವಾಗ್ದಾಳಿ ನಡೆಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts