More

    ಹಾಸ್ಟೆಲ್‌ಗೆ ಸಚಿವರ ಭೇಟಿ

    ಚಿತ್ರದುರ್ಗ:ನಗರದ ಸರ್ಕಾರಿ ಕಲಾ ಕಾಲೇಜು ಬಳಿಯ ಅಲ್ಪಸಂಖ್ಯಾತರ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ಆರೋಪ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಸಂಜೆ ಹಠಾತ್ ಭೇಟಿ ನೀಡಿ ಪರಿಶೀಲಿಸಿದರು.
    ಬೆಂಗಳೂರಿಗೆ ತೆರಳುವ ಮಾರ್ಗ ಹಾಸ್ಟೆಲ್‌ಗೆ ಭೇಟಿ ನೀಡಿದ ಸಚಿವರು,ಹಾಸ್ಟೆಲ್ ವಾರ್ಡ್‌ನ್ ವಿರುದ್ಧ ಕೇಳಿ ಬಂದ ಆರೋಪಗಳ ಕುರಿ ತಂತೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಕಳಪೆ ಆಹಾರ ಪೂರೈಕೆ ಇತ್ಯಾದಿ ವಿದ್ಯಾರ್ಥಿಗಳ ದೂರುಗಳ ಹಿನ್ನೆಲೆಯಲ್ಲಿ ವಾರ್ಡನ್ ಅಮಾ ನತಿಗೆ ಸಚಿವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವ್ಯವಸ್ಥೆ ಮರುಕಳಿಸದೆಂದು ಸಚಿವರು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು. ಶಾಸಕ ಕೆ.ಸಿ.ವೀರೇಂದ್ರಪಪ್ಪಿ,ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts