More

    ಹಿಂದಿ ದಿವಸ ಆಚರಣೆ ವಿರೋಧಿಸಿ ಪ್ರತಿಭಟನೆ

    ಚಿಕ್ಕಮಗಳೂರು: ಹಿಂದಿ ದಿವಸ ಆಚರಣೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕನ್ನಡಸೇನೆ ಕಾರ್ಯಕರ್ತರು ಬುಧವಾರ ನಗರದ ತಾಲೂಕು ಕಚೇರಿಯಿಂದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಮನವಿ ಸಲ್ಲಿಸಿದರು.ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಕನ್ನಡ ಭಾಷೆಗಿದೆ. ಎಂಟು ಸಾಹಿತಿಗಳಿಗೆ ಜ್ಞಾನಪೀಠ ಪ್ರಶಸ್ತಿ ಒಲಿದಿದೆ. ಉತ್ತರ ಕರ್ನಾಟಕದಿಂದ ದಕ್ಷಿಣ ಕರ್ನಾಟಕದವರೆಗೂ ವಿಭಿನ್ನ ಸಂಸ್ಕೃತಿ, ಸಂಪ್ರದಾಯ, ಆಚರಣೆಗಳು ರೂಢಿಯಲ್ಲಿವೆ. ರಾಜ್ಯದಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಕೇಂದ್ರ ಸರ್ಕಾರಿ ಕಚೇರಿಗಳು, ಬ್ಯಾಂಕ್, ಸಾರ್ವಜನಿಕ ಕ್ಷೇತ್ರಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು. ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಕನ್ನಡ ಭಾಷೆಯನ್ನು ಆಡಳಿತ ಭಾಷೆಯನ್ನಾಗಿ ಮಾಡಬೇಕು ಎಂದು ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts