More

    ಹಿರಿಯರನ್ನು ನಿರ್ಲಕ್ಷೃ ಸಲ್ಲದು

    ಯಾದಗಿರಿ: ಪಾಲಕರ ಹೆಸರಿನಲ್ಲಿದ್ದ ಮನೆ ಅಥವಾ ಆಸ್ತಿಯನ್ನು ಮಕ್ಕಳು ತಮ್ಮ ಹೆಸರಿಗೆ ಮಾಡಿಸಿಕೊಂಡು ಅವರನ್ನು ಮನೆಯಿಂದ ಹೊರ ಹಾಕಿದ್ದರೆ, ಮತ್ತೆ ಅದೇ ಆಸ್ತಿ ಮರಳಿ ಪಡೆಯಲು ಕಾನೂನಿನಲ್ಲಿ ಅವಕಾಶವಿದೆ. ಹಿರಿಯ ನಾಗರಿಕರು ಕಾನೂನಿನ ಅರಿವು ಮತ್ತು ನೆರವುವನ್ನು ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಎಲ್. ಹೊನೋಲೆ ಸಲಹೆ ಮಾಡಿದರು.

    ವಿಶ್ವ ಹಿರಿಯ ನಾಗರಿಕರ ದಿನದ ಅಂಗವಾಗಿ ನಗರದ ಹಿಂದಿ ಪ್ರಚಾರಸಭಾ ಆವರಣದಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ನಿವೃತ್ತ ನೌಕರರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಹಿರಿಯರು ಹೆಚ್ಚಿನ ನಿರ್ಲಕ್ಷೃಕ್ಕೆ ಒಳಗಾಗುತ್ತಿದ್ದಾರೆ. ಅವರಿಗೆ ಭದ್ರತೆ ಹಾಗೂ ಸಾಮಾಜಿಕ ರಕ್ಷಣೆ ನೀಡುವತ್ತ ಗಮನ ಹರಿಸಬೇಕು ಎಂದರು.

    ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಮಾತನಾಡಿ, ಮಕ್ಕಳಿಂದ ನಿರ್ಲಕ್ಷೃಕ್ಕೆ ಒಳಾಗಾಗುವ ಹಿರಿಯ ನಾಗರಿಕರು ನೇರವಾಗಿ ಸಹಾಯಕ ಆಯುಕ್ತರಿಗೆಗೆ ದೂರು ನೀಡಬಹುದು. ನ್ಯಾಯಾಲಯಕ್ಕೆ ಹೋಗುವ ಅಗತ್ಯವಿರುವುದಿಲ್ಲ. ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ, ಬುದ್ದಿವಾದ ಮಾತುಗಳು ಕೇಳಿಬರುತ್ತಿಲ್ಲ, ಹಿರಿಯರು ತಮ್ಮ ಮಕ್ಕಳಿಗೆ ಮಾನವೀಯ ಮೌಲ್ಯಗಳ ಕುರಿತು ತಿಳಿ ಹೇಳಬೇಕು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts