More

    ಹುಕ್ಕೇರಿಯಲ್ಲಿ ಎಂದಿನಂತೆ ಸಂತೆ

    ಹುಕ್ಕೇರಿ: ಲಾಕ್‌ಡೌನ್ ಸಂದರ್ಭವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ತರಕಾರಿ ವ್ಯಾಪಾರಿಗಳು ಗ್ರಾಹಕರಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾರೆ. ತಾಲೂಕು ಆಡಳಿತ ತಕ್ಷಣವೇ ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ಜರುಗಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

    ಜಿಲ್ಲಾಡಳಿತ ವಾರದ ಸಂತೆಗಳನ್ನು ರದ್ದು ಪಡಿಸಿದರೂ ಹುಕ್ಕೇರಿ ಪಟ್ಟಣದಲ್ಲಿ ಎಂದಿನಂತೆ ತರಕಾರಿ ವ್ಯಾಪಾರ ನಡೆಯುತ್ತಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಸಂಪೂರ್ಣ ಉಲ್ಲಂಘಿಸಿ ನಡೆಯುತ್ತಿರುವ ವ್ಯಾಪಾರ ವಹಿವಾಟಿನ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ಕೂಡ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಮಾರುಕಟ್ಟೆಯಲ್ಲಿ ಓಡಾಡುತ್ತಿರುವುದು ಜನರಲ್ಲಿ ಆತಂಕ ಉಂಟು ಮಾಡಿದೆ. ಸರ್ಕಾರ ಮನೆ-ಮನೆಗೆ ತೆರಳಿ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ. ಆದರೆ, ವ್ಯಾಪಾರಿಗಳು ಒಂದೇ ಸ್ಥಳದಲ್ಲಿ ಕುಳಿತು ವ್ಯಾಪಾರ ನಡೆಸುತ್ತಿದ್ದಾರೆ. ಅಲ್ಲದೆ, ಕೆಲ ವ್ಯಾಪಾರಸ್ಥರು ರೈತರಿಂದ ಕಡಿಮೆ ದರಕ್ಕೆ ಖರೀದಿಸಿ ಕೆಜಿಗೆ 30 ರೂ. ಇದ್ದ ಬದನೆಕಾಯಿ 60 ರೂ., 20 ಕೆಜಿ ಟೊಮ್ಯಾಟೋ 45 ರೂ., 25 ರೂ. ಕೆಜಿ ಬೆಂಡೆಕಾಯಿ 40 ರೂ. ಹೀಗೆ ವಿವಿಧ ತರಕಾರಿ ಪ್ರತಿ ಕೆಜಿಗೆ 25 ರಿಂದ 30 ರೂ. ಏರಿಸಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts