More

    ಹುಣ್ಣಿಮೆ ಪೂಜಾ ಮಹೋತ್ಸವ ಸಂಪನ್ನ

    ಶನಿವಾರಸಂತೆ: ಸಮೀಪದ ಗೋಪಾಲಪುರ ಗ್ರಾಮದಲ್ಲಿರುವ ಶ್ರೀ ಬನಶಂಕರಿ ಅಮ್ಮನವರ ದೇವಾಲಯದಲ್ಲಿ ಶುಕ್ರವಾರ ಬನದ ಹುಣ್ಣಿಮೆ ಪೂಜಾ ಮಹೋತ್ಸವ ಶ್ರದ್ದಾಭಕ್ತಿಯಿಂದ ನೆರವೇರಿತು.

    ಬೆಳಗ್ಗೆ 8 ಗಂಟೆಗೆ ಶ್ರೀ ಬನಶಂಕರಿ ಅಮ್ಮನವರ ದೇವಾಲಯದಲ್ಲಿ ಬನದ ಹುಣ್ಣಿಮೆ ಪ್ರಯುಕ್ತ ಅರ್ಚಕರು ಶ್ರೀ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಶ್ರೀ ಸೂಕ್ತ, ದುರ್ಗಾಸೂಕ್ತ ಹಾಗೂ ದೇವಿ ಸೂಕ್ತ, ಮಹಾಭಿಷೇಕ ವಿಧಿ ವಿಧಾನಗಳನ್ನು ನೆರವೇರಿಸಿದ ನಂತರ ಗರ್ಭಗುಡಿಯಲ್ಲಿರುವ ದೇವರ ವಿಗ್ರಹಗಳಿಗೆ ಅಲಂಕಾರ ಮಾಡುವುದರ ಮೂಲಕ ಧಾರ್ಮಿಕ ಕಾರ್ಯಕ್ರಮ ನೆರವೇರಿಸಲಾಯಿತು. ಬೆಳಗ್ಗೆ 9 ಗಂಟೆಗೆ ಮಹಾಗಣಪತಿ ಪೂಜೆ, ಪುಣ್ಯಾಹ, ಋತ್ವಿಕ್ ವರ್ಣ, ಕಲಶಾರಾಧನೆ ಕಾರ್ಯ ನೆರವೇರಿಸಲಾಯಿತು. ಬನದ ಹುಣ್ಣಿಮೆ ಪ್ರಯುಕ್ತ ದೇವಾಲಯದಲ್ಲಿ ಬೆಳಗ್ಗೆ 10.30 ರಿಂದ ಶ್ರೀ ಗಣಪತಿ ಹೋಮ, ನವಗ್ರಹ ಹೋಮ ಹಾಗೂ ಶ್ರೀ ದುರ್ಗಾಹೋಮ ಮುಂತಾದ ಹೋಮ ಹವನ ನೆರವೇರಿಸಲಾಯಿತು. ಮಧ್ಯಾಹ್ನ 12.30 ರಿಂದ 1.15 ರವರೆಗೆ ದೇವರಿಗೆ ವಿಶೇಷ ಪೂಜೆ, ಪೂರ್ಣಾಹುತಿ, ಮಹಾಮಂಗಳಾರತಿ, ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಬನದ ಹುಣ್ಣಿಮೆ ಪೂಜಾ ಮಹೋತ್ಸವ ಸಂಪನ್ನಗೊಂಡಿತು.

    ಅರ್ಚಕರಾದ ಕೆ.ಎಸ್.ಪ್ರಸನ್ನ ಮತ್ತು ಎನ್.ಕೆ.ನಾಗೇಶ್ ನೇತೃತ್ವದಲ್ಲಿ ಧಾರ್ಮಿಕ ಪೂಜಾ ವಿಧಿ ವಿಧಾನ ನೆರವೇರಿತು. ಬನದ ಹುಣ್ಣಿಮೆ ಪೂಜಾ ಮಹೋತ್ಸವದಲ್ಲಿ ಗೋಪಾಲಪುರ, ಶನಿವಾರಸಂತೆ ಸೇರಿದಂತೆ ಅಕ್ಕಪಕ್ಕ ಗ್ರಾಮಗಳಿಂದ ನೂರಾರು ಭಕ್ತರು ಪಾಲ್ಗೊಂಡಿದ್ದರು. ಬನದ ಹುಣ್ಣಿಮೆ ಮಹೋತ್ಸವದ ಅಂಗವಾಗಿ ದೇವಾಲಯ ಸಮಿತಿ ವತಿಯಿಂದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಜಿ.ಎಸ್.ಪ್ರಕಾಶ್, ಕಾರ್ಯದರ್ಶಿ ಜಿ.ಟಿ.ಗಣೇಶ್ ಸಮಿತಿ ಪದಾಧಿಕಾರಿಗಳು, ಸದಸ್ಯರು, ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts