More

    ಹುಬ್ಬಳ್ಳಿ ತಾಲೂಕು ವ್ಯಾಪ್ತಿಯಲ್ಲಿ 5.5 ಕೋಟಿ ರೂ. ವಿನಿಯೋಗ

    ಹುಬ್ಬಳ್ಳಿ: ನವಲಗುಂದ ಮತಕ್ಷೇತ್ರದ ಹುಬ್ಬಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 5.5 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ 2019-20ನೇ ಸಾಲಿನ ವಿವಿಧ ಲೆಕ್ಕ ಶೀರ್ಷಿಕೆಯಡಿ ಮಾರ್ಚ್-2020 ಅಂತ್ಯದವರೆಗೆ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಗಳ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಲಾಕ್​ಡೌನ್​ನಿಂದ ಉಂಟಾದ ಆರ್ಥಿಕ ಅಸಮತೋಲನ ಕಾಪಾಡುವುದಕ್ಕಾಗಿ ಯಾವುದೇ ಹೊಸ ಯೋಜನೆ, ಕಾಮಗಾರಿಗೆ ಅನುಮೋದನೆ ನೀಡದಿರುವಂತೆ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈಗಾಗಲೇ ಪ್ರಾರಂಭಗೊಂಡಿರುವ ಕಾಮಗಾರಿ ಮುಂದುವರಿಸಲು ಆರ್ಥಿಕ ಇಲಾಖೆಯ ಅನುಮತಿ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಯಿತು. ಮತಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಅಭಿವೃದ್ಧಿ ಕಾಮಗಾರಿಗಳು ಶೇ. 80ರಷ್ಟು ಪ್ರಗತಿ ಹಂತದಲ್ಲಿವೆ. 42 ದಿನಗಳ ಲಾಕ್ ಡೌನ್ ನಿಂದಾಗಿ ತಾತ್ಕಾಲಿಕವಾಗಿ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಲಾಕ್ ಡೌನ್ ವಿನಾಯಿತಿ ದೊರೆತಿರುವುದರಿಂದ ಕಾಮಗಾರಿಗಳನ್ನು ಪುನಃ ಆರಂಭಿಸಲಾಗುವುದು ಎಂದು ಹೇಳಿದರು. ಕರನೊ ವರದಿ ನೆಗೆಟಿವ್: ನವಲಗುಂದ ಮತಕ್ಷೇತ್ರ ವ್ಯಾಪ್ತಿಯ 28 ಜನರು ದೆಹಲಿಯ ತಬ್ಲಿಘಿ ಜಮಾತ್​ನಲ್ಲಿ ಭಾಗವಹಿಸಿದ್ದರು. ಇವರ ಕರೊನಾ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ ಎಂದು ಮಾಹಿತಿ ನೀಡಿದರು. ತಾಪಂ ಇ.ಒ. ಎಂ.ಎಂ. ಸವದತ್ತಿ, ಸಹಾಯಕ ನಿರ್ದೇಶಕ ಗಂಗಾಧರ ಕಂದಕೂರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಿ.ವಿ. ಪಾಟೀಲ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts