More

    ಹುಬ್ಬಳ್ಳಿ ರೈಲ್ವೆ ಕೆಳಸೇತುವೆ ಶೀಘ್ರವೇ ಪೂರ್ಣ

    ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆನಗರ ಹಾಗೂ ಭವಾನಿನಗರ ಮಧ್ಯ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳಸೇತುವೆಯನ್ನು ಒಂದು ತಿಂಗಳೊಳಗೆ ಹಾಗೂ ಉಣಕಲ್ಲ ರೈಲು ನಿಲ್ದಾಣದ ಬಳಿ ನಿಮಾಣವಾಗಲಿರುವ ಕೆಳಸೇತುವೆಯನ್ನು ನಾಲ್ಕು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

    ದೇಶಪಾಂಡೆನಗರ ಕೃಷ್ಣ ಮಂದಿರದ ಬಳಿ ನಿರ್ವಣವಾಗುತ್ತಿರುವ ಹಾಗೂ ಉಣಕಲ್ಲ ರೈಲು ನಿಲ್ದಾಣದ ಸಮೀಪ ನಿರ್ವಿುಸಲು ಉದ್ದೇಶಿಸಿರುವ ನೂತನ ಕೆಳಸೇತುವೆ ಕಾಮಗಾರಿ ಸ್ಥಳಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಾಳಜಿಯಿಂದಾಗಿ 4.5 ಕೋಟಿ ರೂ. ವೆಚ್ಚದಲ್ಲಿ ದೇಶಪಾಂಡೆ ನಗರದ ರೈಲ್ವೆ ಕೆಳಸೇತುವೆ ಕಾಮಗಾರಿ ಕೈಗೊಳ್ಳಲಾಗಿದೆ. ಉಣಕಲ್ಲ ರೈಲು ನಿಲ್ದಾಣದ ಬಳಿ 6.5 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ವಿುಸಲಾಗುತ್ತಿದೆ ಎಂದರು.

    ಉಣಕಲ್ಲ ರೈಲು ನಿಲ್ದಾಣವನ್ನು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿಪಡಿಸಿ, ಹುಬ್ಬಳ್ಳಿ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದ ಸಂಚಾರ ದಟ್ಟಣೆ ಕಡಿಮೆ ಮಾಡುವ ಅವಕಾಶಗಳಿವೆ ಎಂದರು. ರೈಲ್ವೆ ಗುತ್ತಿಗೆದಾರರಾದ ಸ್ವರ್ಣ ಸಮೂಹ ಸಂಸ್ಥೆಗಳ ಚೇರ್ಮನ್ ವಿ.ಎಸ್.ವಿ. ಪ್ರಸಾದ, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ತಿಪ್ಪಣ್ಣ ಮಜ್ಜಗಿ, ಸಿದ್ದು ಮೊಗಲಿಶೆಟ್ಟರ್, ರವಿ ನಾಯ್ಕ ಇದ್ದರು.

    ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ
    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರೇ ಮುಂದಿನ ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಕೇಳಿಬರುತ್ತಿರುವ ಸುದ್ದಿ ಊಹಾಪೋಹವಷ್ಟೇ. ಅದಕ್ಕೆ ಕಿವಿಗೊಡುವ ಅವಶ್ಯಕತೆ ಇಲ್ಲ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರದ ನಾಯಕರೊಂದಿಗೆ ಸಿಎಂ ರ್ಚಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಸಂಪುಟ ವಿಸ್ತರಣೆ ಖಚಿತ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts