More

    ಹೂಗಾರ ನಿಗಮ ಸ್ಥಾಪನೆ ನಿರ್ಧಾರಕ್ಕೆ ಕವಟಗಿಮಠ ಮೆಚ್ಚುಗೆ

    ಬೆಳಗಾವಿ: ಕರ್ನಾಟಕ ಮೇದಾರ ಅಭಿವೃದ್ಧಿ ನಿಗಮ, ಕರ್ನಾಟಕ ಮಾಲಿ-ಮಾಲಗಾರ ಹಾಗೂ ಹೂಗಾರ ಅಭಿವೃದ್ಧಿ ನಿಗಮ ಸ್ಥಾಪಿಸಿದ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮಲು ಅವರಿಗೆ ಮೇದಾರ, ಮಾಲಿ- ಮಾಲಗಾ‌ ಹಾಗೂ ಹೂಗಾರ ಸಮಾಜದ ಪರವಾಗಿ ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-1ರ ಕ್ರಮ ಸಂಖ್ಯೆ 36(ಎ) ಯಿಂದ (ಜೆ)ವರೆಗೆ ಬರುವ ಮೇದಾರ, ಬಟ್ಟರ್, ಬರ್ನಡ್, ಗೌರಿಗ, ಗೌರಿ, ಗೌರಿ ಮರಾಠ, ಮೇದರಿ, ಬುರುಡ ಜಾತಿಗಳಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿ ಕಲ್ಪಿಸುವುದರ ಜೊತೆಗೆ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸರಕಾರ ಕರ್ನಾಟಕ ಮೇದಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶಿಸಿದೆ.

    ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-1ರ ಕ್ರಮ ಸಂಖ್ಯೆ 40(ಎ) ಯಿಂದ (ಜೆ) ವರೆಗೆ ಬರುವ ಹೂವಾಡಿಗ, ಹುಗಾರ್, ಹೂಗಾರ, ಮಾಲಗಾರ, ಮಾಲಿ, ಪೂಲ್ಟಾಲಿ, ಫುಲ್‌ಮಾಲಿ, ಪುಲಾರಿ, ಪುಲಾರಿ, ಜೀರ್‌ ಜಾತಿಗಳಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿ ಕಲ್ಪಿಸುವುದರ ಜೊತೆಗೆ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ಮಾಲಿ- ಮಾಲಗಾರ್ ಹಾಗೂ ಹೂಗಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಹಿಂದುಳಿದ ಕಲ್ಯಾಣ ಸಚಿವರನ್ನು ಮೇದಾರ, ಮಾಲಿ- ಮಾಲಗಾಬ್ ಹಾಗೂ ಹೂಗಾರ ಸಮಾಜದ ಪರವಾಗಿ ಕವಟಗಿಠ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts