More

    ಹೃದಯದ ಕುರಿತು ಇರಲಿ ಕಾಳಜಿ

    ಚಿತ್ರದುರ್ಗ: ಮಾನವರಿಗೆ ದೇಹದ ಪ್ರತಿ ಅಂಗಾಂಗವೂ ಅತ್ಯಂತ ಮುಖ್ಯವಾಗಿದ್ದು, ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್‌ಕುಮಾರ್ ಮೀನಾ ಸಲಹೆ ನೀಡಿದರು.

    ಇಂಡಿಯಾನ ಎಸ್‌ಜೆಎಂ ಆರ್ಟ್ ಸೆಂಟರ್‌ನಲ್ಲಿ ಶುಕ್ರವಾರ ಸೆಂಟರ್‌ನಿಂದ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಾಗಿ ಹಮ್ಮಿಕೊಂಡಿದ್ದ ಉಚಿತ ಹೃದಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

    ಪ್ರಸ್ತುತ ದಿನಗಳಲ್ಲಿ ಯಾವುದೇ ಕ್ಷೇತ್ರದಲ್ಲಾಗಲಿ ಒತ್ತಡದಿಂದ ಕೆಲಸ ಮಾಡುವ ವಾತಾವರಣ ಸೃಷ್ಟಿಯಾಗುತ್ತಿದೆ. ಆದ್ದರಿಂದ ಹೃದಯದ ಕುರಿತು ಅತೀ ಹೆಚ್ಚು ಕಾಳಜಿ ವಹಿಸಬೇಕು. ಆರೋಗ್ಯದಲ್ಲಿ ಏರು-ಪೇರು ಕಂಡುಬಂದಲ್ಲಿ ತಕ್ಷಣ ತಪಾಸಣೆಗೆ ಒಳಗಾಗಬೇಕು ಎಂದರು.

    ಸೆಂಟರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರೂಪೇಶ್‌ಕುಮಾರ್ ಶೆಟ್ಟಿ ಮಾತನಾಡಿ, ಹೃದಯ ರೋಗದ ಲಕ್ಷಣಗಳು ಕಂಡು ಬಂದಲ್ಲಿ ನಿರ್ಲಕ್ಷ ಮಾಡದೆಯೇ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ಸಲಹೆ ನೀಡಿದರು.

    ಇದೇ ವೇಳೆ 250ಕ್ಕೂ ಹೆಚ್ಚು ಮಂದಿ ಪೊಲೀಸರಿಗೆ ಹೃದಯ, ರಕ್ತದೊತ್ತಡ, ಮಧುಮೇಹ ತಪಾಸಣೆ ನಡೆಸಲಾಯಿತು. ಹೃದಯ ತಜ್ಞ ಡಾ.ಸುಜಯ್, ಇಕೋ ಟೆಕ್ನಿಷಿಯನ್ ನಿಲೀಷಾ, ಎಎಸ್‌ಪಿ ಕುಮಾರಸ್ವಾಮಿ, ಡಿವೈಎಸ್‌ಪಿ ಗಣೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts