More

    ಹೆಗ್ಗಡೆಯವರ ಕಾರ್ಯ ಸಮಾಜಮುಖಿ

    ಸುರಪುರ : ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಕಾರ್ಯ ಸಮಾಜಮುಖಿಯಾಗಿದ್ದು, ಈ ಯೋಜನೆಗಳಿಂದ ಅನೇಕ ಸಂಸಾರಗಳು ನೆಮ್ಮದಿಯ ಜೀವನ ನಡೆಸುತ್ತಿವೆ ಎಂದು ರುಕ್ಮಾಪುರ ಹಿರೇಮಠದ ಶ್ರೀ ಗುರುಶಾಂತಮೂರ್ತಿ ಶಿವಾಚಾರ್ಯ ಹೇಳಿದರು.

    ನಗರದ ರಂಗAಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಬುಧವಾರ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕರ‍್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಮನುಷ್ಯನ ಚಟಗಳು ಅವನನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಕುಗ್ಗುವಂತೆ ಮಾಡುತ್ತವೆ. ಇವುಗಳ ವಿರುದ್ಧ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಜಾಗೃತಿ ಮೂಡಿಸುತ್ತಿರುವುದು ಒಳ್ಳೆಯ ಕೆಲಸವಾಗಿದೆ ಎಂದರು.

    ರಾಜಾ ವೇಣುಗೋಪಾಲ ನಾಯಕ ಮಾತನಾಡಿ, ಇಂದಿನ ಯುವ ಸಮುದಾಯ ದುಶ್ಚಟಗಳ ದಾಸರಾಗುತ್ತಿದ್ದು, ಇದರಿಂದ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ಅವರನ್ನೇ ನಂಬಿರುವ ಕುಟುಂಬ ಅನಗತ್ಯವಾಗಿ ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಮಹಾತ್ಮ ಗಾಂಧಿ ಅವರ ತತ್ವಾದರ್ಶವನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು ಎಂದು ಹೇಳಿದರು.
    ಅಮರಯ್ಯ ಸ್ವಾಮಿ ಉಪನ್ಯಾಸ ನೀಡಿದರು. ಧರ್ಮಸ್ಥಳ ಟ್ರಸ್ಟ್ನ ಜಿಲ್ಲಾ ನಿರ್ದೇಶಕ ಕಮಲಾಕ್ಷ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ್ ಮಾತನಾಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸೂಗೂರೇಶ ವಾರದ, ತಾಲೂಕಿನ ಯೋಜನಾಧಿಕಾರಿ ಸಂತೋಷ ಇದ್ದರು. ವಲಯ ಮೇಲ್ವಿಚಾರಕಿ ಸುಮಂಗಲಾ ವಂದಿಸಿದರು. ಮೇಲ್ವಿಚಾರಕ ಮಂಜುನಾಥ ನಿರೂಪಣೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts