More

    ಹೆಚ್ಚಿನ ದರ ಪಡೆದರೆ ಕ್ರಮ

    ಹಿರೇಬಾಗೇವಾಡಿ: ಕೃಷಿ ಇಲಾಖೆಯಿಂದ ರೈತರಿಗೆ ವಿತರಿಸಲಾಗುತ್ತಿರುವ ಬಿತ್ತನೆ ಬೀಜಗಳನ್ನು ಸರ್ಕಾರ ನಿಗದಿ ಪಡಿಸಿದ ರಿಯಾಯಿತಿ ದರಕ್ಕೆ ಮಾರಾಟ ಮಾಡಬೇಕು. ಹೆಚ್ಚಿನ ಹಣ ಪಡೆದರೆ ಕ್ರಮ ಕೈಗೊಳ್ಳಲು ಸಂಸದೆ ಮಂಗಲ ಅಂಗಡಿ ಅಧಿಕಾರಿಗಳಿಗೆ ಸೂಚಿಸಿದರು.

    ಸೋಮವಾರ ಸಮೀಪದ ಕೆ.ಕೆ.ಕೊಪ್ಪ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಕೃಷಿ ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ 2021-22ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಿಸಿ ಮಾತನಾಡಿ, ಹಿರೇಬಾಗೇವಾಡಿ ಹೋಬಳಿ ಮಟ್ಟದಲ್ಲಿ ರೈತರಿಗೆ ಬೇಕಾಗುವಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ರೈತರು ಸರ್ಕಾರದ ಕರೊನಾ ಮಾರ್ಗಸೂಚಿ ಪಾಲಿಸಿ ಬಿತ್ತನೆ ಬೀಜ ಪಡೆಯಬೇಕು ಎಂದರು. ಕೃಷಿ ಇಲಾಖೆ ಉಪ ನಿರ್ದೇಶಕ ಎಚ್.ಡಿ. ಕೋಳೇಕರ, ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಮೋಹನ ಅಂಗಡಿ, ಪಿಕೆಪಿಎಸ್ ಅಧ್ಯಕ್ಷ ಸುರೇಶ ಕುಡೇನಟ್ಟಿ, ಚೇತನ ಅಂಗಡಿ, ಹಾಲಪ್ಪ ಡೊಂಗರಗಾವಿ, ಶೇಖರ ಪಾಟೀಲ, ಅಂಜು ವಾಘ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts