More

    ಹೆಚ್ಚಿಸಿ ಯುವ ಮತದಾರರ ನೋಂದಣಿ  -ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಸೂಚನೆ 

    ದಾವಣಗೆರೆ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಆರಂಭವಾಗಿದ್ದು, ಯಾದಿಗೆ ಹೆಚ್ಚಿನ ಯುವ ಮತದಾರರನ್ನು ನೊಂದಾಯಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕಿ ಗುಂಜನ್ ಕೃಷ್ಣ ತಿಳಿಸಿದರು.
    ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ, ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
    ಕರಡು ಮತದಾರರ ಪಟ್ಟಿ ಅ.27 ರಂದು ಪ್ರಕಟವಾಗಿದ್ದು, ಡಿ.9ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 2024ರ ಜ.5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.
    ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2024 ಕ್ಕೆ ಜಿಲ್ಲೆಯಲ್ಲಿ 9,47,205 ಗಂಡು, 9,51,359 ಹೆಣ್ಣು ಸೇರಿ 18,98,000 ಜನಸಂಖ್ಯೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಅದಕ್ಕೆ ಅನುಗುಣವಾಗಿ ಶೇ 76.60ರಷ್ಟು ಮತದಾರರಿದ್ದಾರೆ. ಕರಡು ಮತದಾರರ ಪಟ್ಟಿಯನ್ವಯ 7,26,931 ಪುರುಷ, 7,26,887 ಮಹಿಳೆ ಸೇರಿ 14,53,818 ಮತದಾರರಿದ್ದಾರೆ ಎಂದು ವಿವರಿಸಿದರು.
    ಕರಡು ಪಟ್ಟಿಯನ್ವಯ ಯುವ ಮತದಾರರ ವಿವರದನ್ವಯ 18-19 ವರ್ಷದ 10,493 ಪುರುಷ, 8,815 ಮಹಿಳೆ, ಇತರೆ 2 ಸೇರಿ 19,310 ಯುವ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಮಾಹಿತಿ ನೀಡಿದರು.
    ಜಾಗೃತಿ ಮೂಡಿಸುವ ಮೂಲಕ ಯುವ ಮತದಾರರು ಪಟ್ಟಿಯಿಂದ ಹೊರಗುಳಿಯದೆ, ಮತಪಟ್ಟಿಯಲ್ಲಿ ನೊಂದಾಯಿಸುವ ಕೆಲಸ ಆಗಬೇಕು ಎಂದು ಗುಂಜನ್ ಕೃಷ್ಣ ತಿಳಿಸಿದರು. ಎಲ್ಲಾ ಪಕ್ಷದವರು ಮತಗಟ್ಟೆ ಮಟ್ಟದ ಏಜೆಂಟರನ್ನು ನೇಮಕ ಮಾಡಿ ಪಟ್ಟಿ ನೀಡಬೇಕು ಎಂದೂ ಹಾಜರಿದ್ದ ಪಕ್ಷಗಳ ಮುಖಂಡರಿಗೆ ತಿಳಿಸಿದರು.
    ಜಿಪಂ ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts