More

    ಹೆಚ್ಚುವರಿ ಖರೀದಿಗೆ ಕೇಂದ್ರಕ್ಕೆ ಪ್ರಸ್ತಾವನೆ

    ಕಲಬುರಗಿ: ರೈತರ ಬೇಡಿಕೆಯಂತೆ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ರೈತರಿಂದ 25 ಕ್ವಿಂಟಾಲ್ ತೊಗರಿ ಖರೀದಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು.
    ಶರಣಸಿರಸಗಿಯಲ್ಲಿ ಶುಕ್ರವಾರ ತೊಗರಿ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಬಹುತೇಕ ಎಲ್ಲ ಬೇಡಿಕೆಯನ್ನು ಪರಿಶೀಲಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ತಿಳಿಸಿದರು. 
    ಈಗಿನ ನಿಯಮದಂತೆ ಪ್ರತಿ ಎಕರೆಗೆ 5 ಕ್ವಿಂಟಾಲ್ ಮಾತ್ರ ಖರೀದಿ ಮಾಡಲಾಗುತ್ತಿದೆ. ಇನ್ನೂ 10 ಕ್ವಿಂಟಾಲ್ ಖರೀದಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ಬರಲಿದೆ. ಕೇಂದ್ರ ಸಕರ್ಾರದಿಂದ ಆದೇಶ ಬಂದ ತಕ್ಷಣ ಹೆಚ್ಚುವರಿ ಖರೀದಿ ಆರಂಭಿಸಲಾಗುವುದು ಎಂದರು.
    ತೊಗರಿ ಖರೀದಿ ಕೇಂದ್ರದಲ್ಲಿ ಖರೀದಿ ಶೀಘ್ರ ಆರಂಭವಾಗಲಿದ್ದು, ರೈತರು ಸೂಕ್ತ ದಾಖಲೆ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕು. ಗುಣಮಟ್ಟದ ತೊಗರಿಯನ್ನೇ ಕೇಂದ್ರಕ್ಕೆ ನೀಡಬೇಕು ಎಂದು ಕಾರಜೋಳ ಮನವಿ ಮಾಡಿದರು.
    ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಬಿ.ಜಿ. ಪಾಟೀಲ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಜಿಲ್ಲಾಧಿಕಾರಿ ಬಿ.ಶರತ್, ಎಪಿಎಂಸಿ ಕಾರ್ಯದಶರ್ಿ ಶೈಲಜಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಿತೀಂದ್ರನಾಥ ಸೂಗೂರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts