More

    ಹೆಚ್ಚುವರಿ ನೀರಿನ ಬಿಲ್ ವಸೂಲಿ ಆರೋಪ

    ನರಗುಂದ: ಪುರಸಭೆ ಅಧಿಕಾರಿಗಳು ನಗರ ನೀರು ಸರಬರಾಜು ಯೋಜನೆಯಡಿ 24ಗಿ7 ನಲ್ಲಿಗಳ ಸಂಪರ್ಕ ಪಡೆದಿರುವ ಸಾರ್ವಜನಿಕರಿಂದ ಹೆಚ್ಚುವರಿ ಬಿಲ್ ವಸೂಲಿ ಮಾಡುತ್ತಿದ್ದಾರೆ. ಅಲ್ಲದೆ, ಐತಿಹಾಸಿಕ ನರಗುಂದ ಗುಡ್ಡದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ತಡೆಗಟ್ಟುವಂತೆ ಆಗ್ರಹಿಸಿ ಮಹದಾಯಿ, ಕಳಸಾ-ಬಂಡೂರಿ ರೈತ ಒಕ್ಕೂಟ ಸಮಿತಿ ಸದಸ್ಯರು ಮಂಗಳವಾರ ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಬ್ಯಾಳಿ ಅವರಿಗೆ ಮನವಿ ಸಲ್ಲಿಸಿದರು.

    ರೈತ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಸಾಬಳೆ ಮಾತನಾಡಿ, ನಗರಾಭಿವೃದ್ಧಿ, ಒಳಚರಂಡಿ ಮಂಡಳಿ ಇಲಾಖೆ ಅಧಿಕಾರಿಗಳು ಕಳೆದ ಎರಡು ವರ್ಷಗಳಿಂದ ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿ ಆರಂಭಿಸಿದ್ದಾರೆ. ಈ ಕಾಮಗಾರಿಯ ಪೈಪ್​ಲೈನ್ ಮತ್ತು ನಲ್ಲಿಗಳ ಜೋಡಣೆ ಕಾಮಗಾರಿ ಪಟ್ಟಣದ ಬಹುತೇಕ ಬಡಾವಣೆಗಳಲ್ಲಿ ಇನ್ನೂ ಪೂರ್ಣಗೊಂಡಿಲ್ಲ. ಕೆಲವೊಂದು ಬಡಾವಣೆಯ ಜನರಿಗೆ ಕಲುಷಿತ ನೀರು ಪೂರೈಕೆಯಾಗುತ್ತಿದೆ. ಇದರಿಂದ ಸಾರ್ವಜನಿಕರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ ಎಂದರು.

    ಕೆಲವರ ಮನೆಯ ನಲ್ಲಿಗಳಿಗೆ ಅಳವಡಿಸಿರುವ ಮೀಟರ್​ಗಳು ಇನ್ನೂ ಕಾರ್ಯಾರಂಭವಾಗಿಲ್ಲ. ಆದರೂ, ಪ್ರತಿಯೊಂದು ಮನೆಯವರು ಕಡ್ಡಾಯವಾಗಿ 4,500 ರೂಪಾಯಿ ನೀರಿನ ಕರ ಪಾವತಿಸುವಂತೆ ತಿಳಿಸಿದ್ದಾರೆ. ಇನ್ನು ಹಳೆಯ ನಲ್ಲಿಗಳ ಸಂಪರ್ಕ ಹೊಂದಿರುವವರಿಂದ 1,200 ರೂ. ಕರವನ್ನು ವಸೂಲಿ ಮಾಡುತ್ತಿದ್ದಾರೆ. ಐತಿಹಾಸಿಕ ನರಗುಂದ ಗುಡ್ಡದಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಈ ಕುರಿತು ಸಚಿವ ಸಿ.ಸಿ. ಪಾಟೀಲ ಹಾಗೂ ಪುರಸಭೆ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರೈತ ಸಂಘದ ತಾಲೂಕಾಧ್ಯಕ್ಷ ವಿಠ್ಠಲ ಜಾಧವ, ಚನ್ನು ನಂದಿ, ರಾಘವೇಂದ್ರ ಗುಜಮಾಗಡಿ, ಶ್ರೀಪಾದ ಆನೇಗುಂದಿ, ಪ್ರಕಾಶ ಕಲ್ಲೇಕನವರ, ಚಂದ್ರಗೌಡ ಪಾಟೀಲ, ಡಿ.ಎಂ. ನಾಯ್ಕರ್ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts