More

    ಹೆಚ್ಚು ಶಿಬಿರಗಳನ್ನು ಆಯೋಜಿಸಿ

    ಕೊಡಗು: ರಕ್ತಕ್ಕೆ ಪರ್ಯಾಯವಿಲ್ಲದ ಹಿನ್ನೆಲೆಯಲ್ಲಿ ರಕ್ತದಾನಿಗಳೇ ಬಡಜೀವಗಳನ್ನು ಉಳಿಸಬೇಕಿದೆ ಎಂದು ಮಡಿಕೇರಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಸಂಧ್ಯಾ ಸಲಹೆ ನೀಡಿದರು.
    ಸೋಮವಾರಪೇಟೆ ತಾಲೂಕು ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವತಿಯಿಂದ ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

    ಜಿಲ್ಲೆಯಲ್ಲಿ ಡೆಂೆ ಬಾಧೆ ಹಿನ್ನೆಲೆಯಲ್ಲಿ ಹೆಚ್ಚಿನ ರಕ್ತದ ಅವಶ್ಯಕತೆಯಿದೆ. ವಾರಕ್ಕೆ ಎರಡು ದಿನ ಶಿಬಿರಗಳನ್ನು ನಡೆಸಲಾಗುತ್ತಿದೆ. ಆದರೂ ರಕ್ತ ಸಾಲುತ್ತಿಲ್ಲ. ಸಂಘ-ಸಂಸ್ಥೆಗಳು ರಕ್ತದಾನ ಶಿಬಿರಗಳನ್ನು ಹೆಚ್ಚೆಚ್ಚು ಆಯೋಜಿಸಬೇಕು ಎಂದು ಹೇಳಿದರು.

    ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ್ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಬಿಂದು ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಪಂ ಸದಸ್ಯರಾದ ಗೋಪಾಲಕೃಷ್ಣ, ಶಂಕರ, ಮುಖ್ಯಶಿಕ್ಷಕಿ ತಂಗಮ್ಮ, ಸಮುದಾಯ ಆರೋಗ್ಯ ಅಧಿಕಾರಿ ಧರಣೇಶ್ ಇದ್ದರು. ಗ್ರಾಮೀಣ ಭಾಗದ 31 ಜನ ರಕ್ತದಾನ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts