More

    ಹೆಣ್ಣು ಮಕ್ಕಳಿಗೆ ಶಿಕ್ಷಣವೇ ಆಧಾರ

    ಕೋಲಾರ: ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಸರ್ಕಾರ ಮತ್ತು ವಿವಿಧ ಸಂಸ್ಥೆಗಳು ಶಾಲಾ-ಕಾಲೇಜು ಸ್ಥಾಪಿಸಿವೆ. ಈ ಅವಕಾಶ ಸದುಪಯೋಗಪಡಿಸಿಕೊಂಡು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿದರೆ ಕಲಿತ ಶಿಕ್ಷಣವೇ ಜೀವನಕ್ಕೆ ಭದ್ರ ಬುನಾದಿಯಾಗುತ್ತದೆ ಎಂದು ನಗರದ ಸರ್ಕಾರಿ ಮಹಿಳಾ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಂಡಿತ್ ಮುನಿವೆಂಕಟಪ್ಪ ಹೇಳಿದರು.

    2018-19ನೇ ಸಾಲಿನಲ್ಲಿ ಬಿಎಸ್ಸಿ ಪಿಸಿಎಂ ಮುಗಿಸಿರುವ ವಿದ್ಯಾರ್ಥಿನಿಯರಿಗೆ ಸೋಮವಾರ ಸರ್ಕಾರಿ ಮಹಿಳಾ ಕಾಲೇಜಿನ ವಿವೇಕಾನಂದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರದಾನ ಸಮಾರಂಭದಲ್ಲಿ 33 ವಿದ್ಯಾರ್ಥಿನಿಯರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಹೆಣ್ಣು ಮಕ್ಕಳಿಗೆ ಶಿಕ್ಷಣವೇ ಆಧಾರ ಎಂದು ಪ್ರತಿಪಾದಿಸಿದರು.

    ವಿದ್ಯಾರ್ಥಿನಿಯರಿಗೆ ಸಾವಿತ್ರಿ ಬಾಯಿುಲೆ ಆದರ್ಶವಾಗಬೇಕು, ಹಿಂದಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಕಲ್ಪಿಸುವ ವ್ಯವಸ್ಥೆ ಕಡಿಮೆ ಇತ್ತು, ಹಳ್ಳಿಗಾಡಿನ ಮಕ್ಕಳನ್ನು ಶಾಲೆಗೆ ಸೇರಿಸದೆ ಬಾಲ್ಯವಿವಾಹ ಮಾಡಿ ಪಾಲಕರು ಜವಾಬ್ದಾರಿ ಮುಗಿಸಿಕೊಳ್ಳುತ್ತಿದ್ದರು, ಕಾಲ ಕ್ರಮೇಣ ಸಮಾಜದಲ್ಲಿ ಅರಿವು ಹೆಚ್ಚಾಗುತ್ತಿರುವುದರಿಂದ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆದು ದೊಡ್ಡ ದೊಡ್ಡ ಹುದ್ದೆ ಅಲಂಕರಿಸಿ ಕುಟುಂಬಕ್ಕೆ ಆಧಾರವಾಗಿದ್ದಾರೆ ಎಂದರು.

    ಉನ್ನತ ಶಿಕ್ಷಣ ಪಡೆಯುವ ಹೆಣ್ಣು ಮಕ್ಕಳು ದೇಶದಲ್ಲಿನ ಬಡತನ, ಅನಕ್ಷರತೆ, ಸಾಮಾಜಿಕ ಪಿಡುಗು ನಿವಾರಿಸಲು ಗಮನ ಹರಿಸಬೇಕು ಎಂದರು. ಕಾಲೇಜು ಪ್ರಾಂಶುಪಾಲ ಡಾ.ಡಿ.ಇ.ಗಂಗಾಧರ್‌ರಾವ್ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳಿಗಾಗಿ ಸ್ಥಾಪಿಸಿರುವ ಈ ಕಾಲೇಜಿನಲ್ಲಿ ಓದಿರುವ ನೂರಾರು ವಿದ್ಯಾರ್ಥಿನಿಯರು ಪ್ರಸ್ತುತ ವಿವಿಧ ಹುದ್ದೆ ಅಲಂಕರಿಸಿದ್ದಾರೆ, ಗುಣಮಟ್ಟದ ಶಿಕ್ಷಣ ನೀಡುತ್ತಿರುವುದರಿಂದ ಜಿಲ್ಲೆಯ ವಿವಿಧ ಕಡೆಗಳಿಂದ ವಿದ್ಯಾರ್ಥಿನಿಯರು ಕಾಲೇಜಿಗೆ ಬರುತ್ತಿದ್ದಾರೆ. ಕಾಲೇಜಿನಲ್ಲಿ ಕಲಿಕೆಗೆ ಉತ್ತಮ ವಾತಾವರಣ, ಪರಿಸರ ಇರುವುದರಿಂದ ಪ್ರತಿವರ್ಷ ಉತ್ತಮ ಫಲಿತಾಂಶ ಸಿಗುತ್ತಿದೆ ಎಂದರು.

    ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ.ಕೆ.ಮುರುಗನ್ ವಿಜ್ಞಾನ ವಿಭಾಗದ ಮಕ್ಕಳ ಸಾಧನೆ, ಬೋಧನೆ ಕುರಿತು ವಿವರಿಸಿದರು. ಭೌತಾಶಸ್ತ್ರ ವಿಭಾಗದ ಮುಖ್ಯಸ್ಥೆ ಕೆ.ಸೀನಾ ನಾಯಕ್, ಗಣಿತ ವಿಭಾಗದ ಪ್ರಭಾರಿ ಮುಖ್ಯಸ್ಥ ಎಲ್.ಸೀನಪ್ಪ, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಆರ್.ಡಿ.ಜನಾರ್ದನ್, ಹಳೇ ವಿದ್ಯಾರ್ಥಿಗಳ ಸಂಘದ ಸಂಚಾಲಕಿ ಎನ್.ಸೌಮ್ಯಾ, ಪ್ರೊ.ರವೀಂದ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts