More

    ಹೆದ್ದಾರಿ ಕಾಮಗಾರಿ ಆರಂಭಿಸುವಂತೆ ಮನವಿ ಸಲ್ಲಿಕೆ

    ಯಳಂದೂರು: ಕನಕಪುರದಿಂದ ತಮಿಳುನಾಡಿನ ದಿಂಡಿಗಲ್‌ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 209ರ ಕಾಮಗಾರಿಯನ್ನು ಮತ್ತೆ ಆರಂಭಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಮನವಿ ಸಲ್ಲಿಸಲಾಗಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಅವರು ಸಮ್ಮತಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಮಾಹಿತಿ ನೀಡಿದರು.


    ಬೆಂಗಳೂರಿಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಶುಕ್ರವಾರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಈ ಹಿಂದೆ ಆಸ್ಕರ್ ಫರ್ನಾಂಡಿಸ್ ಕಾಲದಲ್ಲಿ ಈ ಯೋಜನೆಗೆ ಅನುಮೋದನೆ ಸಿಕ್ಕಿತ್ತು. 2017ರಲ್ಲಿ ಹೆದ್ದಾರಿ ಕಾಮಗಾರಿ ಆರಂಭಗೊಂಡಿತ್ತು. ಇದು 2019ರಲ್ಲಿ ಮುಕ್ತಾಯಗೊಳ್ಳಬೇಕಿತ್ತು. ಆದರೆ, ಇದು ಇನ್ನೂ ಪೂರ್ಣಗೊಂಡಿಲ್ಲ. ಇದು ನನೆಗುದಿಗೆ ಬಿದ್ದಿದ್ದು ಇದನ್ನು ಪೂರ್ಣಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕನಕಪುರ ಸಂಸದ ಡಿ.ಕೆ. ಸುರೇಶ್ ಜತೆಗೂಡಿ ಮನವಿ ಸಲ್ಲಿಸಿದ್ದು, ಅವರು ಈ ಬಗ್ಗೆ ದೆಹಲಿಗೆ ತೆರಳಿದ ನಂತರ ಸಂಬಂಧಪಟ್ಟ ಮಾಹಿತಿ ಪಡೆದುಕೊಂಡು ಪೂರ್ಣಗೊಳಿಸಲು ಕ್ರಮ ವಹಿಸುವ ಭರವಸೆ ನೀಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.


    ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಕನಕಪುರ ಮಾರ್ಗವಾಗಿ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಯೋಜನೆ ಬಗ್ಗೆ ಮಾತನಾಡಿ, ಇದಕ್ಕೆ ಸರ್ವೇ ಕಾರ್ಯ ಮಾಡಿಸುವುದಾಗಿ ಹೇಳಿದ್ದಾರೆ. ಆದರೆ ಈಗಾಗಲೇ ಆ ಕೆಲಸ ಮುಗಿದು ಯೋಜನೆ ಸಿದ್ಧವಾಗಿದೆ. ಈ ಬಗ್ಗೆ ಭೂ ಸ್ವಾಧೀನ ಪ್ರಕ್ರಿಯೆ ಶುರು ಮಾಡಲು ರಾಜ್ಯ ಸರ್ಕಾರ ಕ್ರಮ ವಹಿಸಬೇಕು, ನಂತರ ಇಲ್ಲಿಂದ ತಮಿಳುನಾಡಿಗೆ ರೈಲು ಸಂಪರ್ಕ ಕಲ್ಪಿಸುವ ಕೆಲಸವನ್ನು ಮಾಡಲಿ ಎಂದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts