More

    ಹೆಬ್ಬಳ್ಳಿ ಗ್ರಾಮಸ್ಥರ ಪ್ರತಿಭಟನೆ

    ಧಾರವಾಡ: ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸಿ ದ್ದಲ್ಲದೆ, ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಿರಾಶ್ರಿತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

    2019ರ ಆಗಸ್ಟ್ ಹಾಗೂ ಸೆಪ್ಟೆಂಬರ್​ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹೆಬ್ಬಳ್ಳಿ ಗ್ರಾಮದ ಹಲವು ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. ಪರಿಹಾರ ನೀಡಲು ನೋಡಲ್ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿದ್ದು, ಎ, ಬಿ, ಸಿ ಗ್ರೇಡ್ ನೀಡುವಲ್ಲಿ ಭಾರಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದರು.

    ಅರ್ಹರನ್ನು ಗುರುತಿಸಿ ಪರಿಹಾರ ನೀಡುವಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ತಾರತಮ್ಯ ಎಸಗಿದ್ದಾರೆ. ಜಿಪಿಎಸ್​ನಲ್ಲಿ ಗುರುತಿಸಿದ ಮನೆಗಳು, ಪರಿಹಾರ ನೀಡಿದ ಮನೆಗಳೇ ಬೇರೆ ಬೇರೆಯಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು.

    ಡಿಸಿ ಮರು ಸಮೀಕ್ಷೆ ನಡೆಸಿ ಅರ್ಹರಿಗೆ ಪರಿಹಾರ ವಿತರಿಸಲು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅರ್ಹ ನಿರಾಶ್ರಿತರು ಸೇರಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಯಲ್ಲಪ್ಪ ಸಂಗೊಳ್ಳಿ, ಫಕೀರಪ್ಪ ಸುಣಗಾರ, ಮಹಾದೇವ ಸುಣಗಾರ, ಮಲ್ಲಪ್ಪ ಕುಡೇಕಾರ, ತಮ್ಮಣ್ಣ ಸಾದರ, ಹನುಮಂತಪ್ಪ ಮಿನಿಕೇರಿ, ದೇವಪ್ಪ ತಲವಾಯಿ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts