More

    ಹೈಕೋರ್ಟ್ ನಿರ್ದೇಶನಗಳನ್ನು ಪಾಲಿಸಿ

    ತರೀಕೆರೆ: ಗಣೇಶೋತ್ಸವದ ಆರಂಭದಿಂದ ಅಂತ್ಯದವರೆಗೆ ನಿರ್ವಹಣೆ ಹೊಣೆ ಹೊತ್ತವರು ಸರ್ಕಾರ ಮತ್ತು ಹೈಕೋರ್ಟ್ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಎಸ್ಪಿ ಉಮಾ ಪ್ರಶಾಂತ್ ಹೇಳಿದರು.

    ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗಣೇಶೋತ್ಸವದ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಮತ್ತು ಶಾಂತಿ ಸಭೆ ಉದ್ಘಾಟಿಸಿ ಮಾತನಾಡಿದರು. ಎಲ್ಲ ಧರ್ಮದವರು ಶಾಂತಿ ಮತ್ತು ಸೌಹಾರ್ದದಿಂದ ಗಣೇಶೋತ್ಸವ ಆಚರಿಸಬೇಕು. ಗಣಪತಿ ಪ್ರತಿಷ್ಠಾಪಿಸುವ ಸಂಘ ಸಂಸ್ಥೆಗಳು ಏಕಗವಾಕ್ಷಿ ಪದ್ಧತಿಯಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಸಮಿತಿಯವರು ಕಡ್ಡಾಯವಾಗಿ ಗುರುತಿನ ಚೀಟಿ ಹೊಂದಿರಬೇಕು ಎಂದರು.

    ಆಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಬಲವಂತವಾಗಿ ಚಂದ ವಸೂಲಿ ಮಾಡಬಾರದು. ಸರ್ಕಾರ ಪಿಒಪಿ ಗಣಪತಿ ನಿಷೇಧಿಸಿದೆ. ನಿಗದಿತ ಬಾವಿ ಅಥವಾ ಕಲ್ಯಾಣಿಗಳಲ್ಲಿ ವಿಗ್ರಹಗಳನ್ನು ವಿಸರ್ಜಿಸಬೇಕು ಎಂದು ತಿಳಿಸಿದರು.  ಉಪವಿಭಾಗಾಧಿಕಾರಿ ಎಸ್.ಸಿದ್ದಲಿಂಗ ರೆಡ್ಡಿ ಮಾತನಾಡಿ, ಗೌರಿ-ಗಣೇಶೋತ್ಸವ ಆಚರಣೆ ಉತ್ಸಾಹದಲ್ಲಿ ಯಾರೂ ಕಾನೂನು, ನಿಯಮಗಳನ್ನು ಮೀರಬಾರದು. ಲೌಡ್​ಸ್ಪೀಕರ್, ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧಿಸಲಾಗಿದೆ. ಪೊಲೀಸ್ ಇಲಾಖೆ ಮಾರ್ಗಸೂಚಿ ಪಾಲಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts