More

    ಹೈನುಗಾರರಿಗೂ ಕೆನರಾ ಬ್ಯಾಂಕ್ ಕಿಸಾನ್ ಕ್ರೆಡಿಟ್ ಕಾರ್ಡ್

    ಕಡೂರು: ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವವರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ಕೆನರಾ ಬ್ಯಾಂಕ್ ಮುಂದಾಗಿರುವುದು ಶ್ಲಾಘನೀಯ ಎಂದು ಕಡೂರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ತಿಳಿಸಿದರು.

    ದೊಡ್ಡಪಟ್ಟಣಗೆರೆ ಗ್ರಾಮದಲ್ಲಿ ಮಂಗಳವಾರ ಕೆನರಾ ಬ್ಯಾಂಕ್​ನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

    ಸರ್ಕಾರ ಸಾಲದ ಕಂತು ಪಾವತಿಸಲು ಸಮಯ ನೀಡಿದ್ದರೂ ಸ್ವಯಂಪ್ರೇರಿತರಾಗಿ ಸಕಾಲದಲ್ಲಿ ಕಂತು ಪಾವತಿ ಮಾಡಿದ ಹಿರಿಮೆ ಜಿಗಣೇಹಳ್ಳಿ ಮತ್ತು ಪಟ್ಟಣಗೆರೆ ಗ್ರಾಪಂ ವ್ಯಾಪ್ತಿಯ ರೈತರಿಗೆ ಸಲ್ಲುತ್ತದೆ. ಇಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರ ಆರ್ಥಿಕ ಅಭಿವೃದ್ಧಿಯಲ್ಲಿ ಕೆನರಾ ಬ್ಯಾಂಕ್ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.

    ಕೆನರಾ ಬ್ಯಾಂಕ್ ಎಜಿಎಂ ರಾಘವೇಂದ್ರ ಮುನಾಲ್ ಮಾತನಾಡಿ, ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಅನೇಕ ಸವಲತ್ತುಗಳನ್ನು ನೀಡುತ್ತಿದೆ. ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಎರಡು ಲಕ್ಷ ರೂ.ವರೆಗೆ ಸಾಲ ಪಡೆಯಬಹುದಾಗಿದೆ. ಹಿಂದೆ ಸಾಲ ಪಡೆದಿದ್ದರೂ ಮತ್ತೆ ಸಾಲ ಪಡೆಯಬಹುದಾಗಿದೆ. ಹೈನುಗಾರಿಕೆ ಮಾಡುವವರಿಗೂ ಕೆಸಿಸಿ ಸಾಲ ನೀಡಲಾಗುತ್ತದೆ. ಜಿಲ್ಲೆಯ 61 ಶಾಖೆಗಳಲ್ಲಿ ಮೊದಲ ಬಾರಿ ಶಿಬಿರಕ್ಕೆ ಚಾಲನೆ ನೀಡಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts