More

    ಹೈನುಗಾರಿಕೆಯಿಂದ ಸ್ವಾವಲಂಬಿ ಬದುಕು

    ನರೇಗಲ್ಲ: ಹವಾಮಾನ ವೈಪರೀತ್ಯದಿಂದ ಕೃಷಿ ವಲಯದ ಅಭಿವೃದ್ಧಿಗೆ ಸಾಕಷ್ಟು ಹಿನ್ನಡೆಯಾಗುತ್ತಿದೆ. ಇದರಿಂದ ಪಾರಾಗಲು ಕೃಷಿಯೊಂದಿಗೆ ಹೈನುಗಾರಿಕೆ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬಹುದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಚೆನ್ನಯ್ಯ.ಕೆ. ಎಚ್ ಹೇಳಿದರು.

    ಸಮೀಪದ ತೋಟಗಂಟಿ ಗ್ರಾಮದ ಶ್ರೀ ಅನ್ನದಾನೀಶ್ವರ ಮಠದಲ್ಲಿ ಗುರುವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಹೈನುಗಾರಿಕೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ‘ಇತ್ತೀಚಿನ ದಿನಗಳಲ್ಲಿ ರೈತರು ಹೈನುಗಾರಿಕೆಯಿಂದ ಹೆಚ್ಚು ಆದಾಯ ಗಳಿಸುತ್ತಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹೈನುಗಾರಿಕೆ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಸಾಕಷ್ಟು ಕುಟುಂಬಗಳು ಆರ್ಥಿಕವಾಗಿ ಸ್ವಾವಲಂಬಿಯಾಗಿವೆ. ಹೈನುಗಾರಿಕೆಯ ಜೀವಾಳವಾಗಿರುವ ಹಸುಗಳನ್ನು ಆರೋಗ್ಯದಿಂದ ಇರುವಂತೆ ನೋಡಿಕೊಳ್ಳಬೇಕು. ಕೊಟ್ಟಿಗೆಯನ್ನು ಸದಾ ಸ್ವಚ್ಛವಾಗಿಡಬೇಕು. ಹಸುಗಳನ್ನು ಖರೀದಿಸುವಾಗ ಉತ್ತಮ ತಳಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಹಸುಗಳಿಗೆ ಕಾಯಿಲೆಗಳು ಕಾಣಿಸಿಕೊಂಡರೆ ಕೂಡಲೇ ವೈದ್ಯರನ್ನು ಸಂರ್ಪಸಬೇಕು. ವಿಳಂಬ ಮಾಡಿದರೆ ರೋಗ ಉಲ್ಬಣಿಸುವ ಸಾಧ್ಯತೆ ಇರುತ್ತದೆ. ಗರ್ಭಧಾರಣೆ ಸಮಯದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು’ ಎಂದರು.

    ನರೇಗಲ್ಲ ವಲಯ ಮೇಲ್ವಿಚಾರಕಿ ರೂಪಾ ಹೆಬ್ಬಾಳಟ್ಟಿ, ಸಂಪನ್ಮೂಲ ವ್ಯಕ್ತಿ ವಿರೂಪಾಕ್ಷಪ್ಪ ಮಾತನಾಡಿದರು. ತೋಟಗಂಟಿ ಒಕ್ಕೂಟದ ಅಧ್ಯಕ್ಷೆ ಸುನಂದಾ ಅಧ್ಯಕ್ಷತೆ ವಹಿಸಿದ್ದರು. ಅಕ್ಕಮ್ಮ ಪಾಟೀಲ, ಕಮಲಾಕ್ಷಿ ತೇಜಪ್ಪನವರ, ಪ್ರಭುಗೌಡ ಪಾಟೀಲ, ಮಲ್ಲಿಕಾರ್ಜುನ ತೇಜಪ್ಪನವರ ಸೇರಿದಂತೆ ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಮಮತಾಜ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts