More

    ಹೈರಿಗೆ ಗ್ರಾಮದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ

    ಹನಗೋಡು: ಹನಗೋಡು ಹೋಳಿಯ ಹೈರಿಗೆ ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಬಸವೇಶ್ವರ ದೇವಸ್ಥಾನದ ನಾಲ್ಕು ಎಕರೆ ಜಮೀನು ಸೇರಿದಂತೆ ಅಕ್ಕಪಕ್ಕದ ಜಮೀನಿನಲ್ಲಿ ಒಂದು ತಿಂಗಳಿಂದ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ.


    ಕಲ್ಲು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೇರಿದಂತೆ ಸಂಬಂಧಿಸಿದ ಇತರ ಇಲಾಖೆ ಅಧಿಕಾರಿಗಳು ಮೌನವಾಗಿರುವುದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದೆ. ಕಲ್ಲುಗಳನ್ನು ಮುಖ್ಯ ರಸ್ತೆಯಲ್ಲೇ ಸಾಗಣೆ ಮಾಡಲಾಗುತ್ತಿದೆ. ಆದರೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಕಂಡು ಕಾಣದಂತಿದ್ದಾರೆ.


    ಹೈರಿಗೆ ಗ್ರಾಮದ ಬಸವೇಶ್ವರ ದೇವಾಲಯವು ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಹೆಸರಿನಲ್ಲಿ 6 ಎಕರೆ ಜಮೀನಿದೆ. ಈ ಪೈಕಿ 4 ಎಕರೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡಲಾಗುತ್ತಿದೆ.


    ಈ ಬಗ್ಗೆ ‘ವಿಜಯವಾಣಿ’ ತಹಸೀಲ್ದಾರ್ ಲೆಫ್ಟಿನೆಂಟ್ ಡಾ.ಆಶೋಕ್ ಅವರನ್ನು ವಿಚಾರಿಸಿದಾಗ ಹೈರಿಗೆಯಲ್ಲಿ ನಡೆಯುತ್ತಿರುವ ಗಣಿಗಾರಿಕೆ ನನ್ನ ಗಮನಕ್ಕೆ ಬಂದಿಲ್ಲ. ಕೂಡಲೇ ಸಂಬಂಧಪಟ್ಟ ಗ್ರಾಮಲೆಕ್ಕಿಗ, ಕಂದಾಯ ಅಧಿಕಾರಿಯನ್ನು ಸ್ಥಳಕ್ಕೆ ತೆರಳಿ ಪರಿಶೀಲಿಸುವಂತೆ ಸೂಚಿಸುತ್ತೇನೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts