More

    ಹೊರಗುತ್ತಿಗೆ ನೌಕರರನ್ನು ನೇರ ವೇತನಕ್ಕೆ ಒಳಪಡಿಸದಿದ್ದಲ್ಲಿ ಹೋರಾಟ

    ದಾವಣಗೆರೆ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯನಿರತ ಹೊರಗುತ್ತಿಗೆ ನೌಕರರನ್ನು ಗುತ್ತಿಗೆ ಪದ್ದತಿ ಬದಲು ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆ ಒಳಪಡಿಸಬೇಕೆಂದು ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದರು.

    ನಗರದ ರೋಟರಿ ಸಭಾಂಗಣದಲ್ಲಿ ಶುಕ್ರವಾರ, ಹೊರಗುತ್ತಿಗೆ ನೌಕರರ ಸಂಘದ ದಾವಣಗೆರೆ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮಾತನಾಡಿದರು.
    ನಗರಗಳ ಸ್ವಚ್ಛತೆ, ಕುಡಿಯುವ ನೀರು, ಬೀದಿದೀಪ ನಿರ್ವಹಣೆ ನಗರ ಸ್ಥಳೀಯ ಸಂಸ್ಥೆಗಳ ಪ್ರಮುಖ ಆದ್ಯತೆಯಾಗಿದೆ. ಆದರೆ ಇವೆಲ್ಲವನ್ನೂ ತಳಮಟ್ಟದಲ್ಲಿ ಜಾರಿಗೊಳಿಸುವ ವಾಹನ ಚಾಲಕರು, ನೀರಗಂಟಿಗಳನ್ನು ನಿರ್ಲಕ್ಷಿಸಲಾಗಿದೆ. ಕಸ ಗುಡಿಸುವವರನ್ನು ಮಾತ್ರ ಪೌರಕಾರ್ಮಿಕರೆಂದು ಪರಿಗಣಿಸುವ ಮೂಲಕ ಅಧಿಕಾರಿಗಳು ತಾರತಮ್ಯ ಮಾಡುವುದು ಸರಿಯಲ್ಲ. ಸರ್ಕಾರ ಕಾಲಮಿತಿಯೊಳಗೆ ನೌಕರರ ಆಗ್ರಹಗಳನ್ನು ಈಡೇರಿಸಬೇಕು. ತಪ್ಪಿದಲ್ಲಿ ಯಾವುದೇ ಹೋರಾಟಕ್ಕೆ ಸಂಘ ಸಿದ್ದವಿದೆ ಎಂದರು.
    ದಾವಣಗೆರೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷರಾಗಿ ಮಹಾನಗರಪಾಲಿಕೆಯ ದುಗ್ಗೇಶ್, ಕಾರ್ಯದರ್ಶಿಯಾಗಿ ಸಾಗರ್, ಗೌರವಾಧ್ಯಕ್ಷರಾಗಿ ವೀರೇಶ್ ಆಯ್ಕೆಯಾದರು. ರಾಜ್ಯ ಕಾರ್ಯದರ್ಶಿ ಶ್ರೀನಿವಾಸ್, ಪೌರಕಾರ್ಮಿಕರ ಸಂಘದ ಮುಖಂಡರಾದ ನೀಲಗಿರಿಯಪ್ಪ, ಮಲೇಬೆನ್ನೂರು ಘಟಕದ ಗಂಗಾಧರ, ಮೈಲಾರಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts