More

    ಹೊರಗುತ್ತಿಗೆ ನೌಕರರನ್ನು ಸೇವೆಯಿಂದ ಕೈಬಿಟ್ಟಿದ್ದಕ್ಕೆ ಆಕ್ರೋಶ

    ಚಿಕ್ಕಬಳ್ಳಾಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಹೊರ ಗುತ್ತಿಗೆ ನೌಕರರನ್ನು ಕೈ ಬಿಟ್ಟಿರುವುದನ್ನು ಖಂಡಿಸಿ ಹಾಸ್ಟೆಲ್ ನೌಕರರು ಜಿಲ್ಲಾಡಳಿತ ಭವನದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

    ಸೂಕ್ತ ಸವಲತ್ತುಗಳು ಇಲ್ಲದಿದ್ದರೂ ಹಲವು ವರ್ಷಗಳಿಂದ ವಿದ್ಯಾರ್ಥಿ ನಿಲಯಗಳಲ್ಲಿ ಹೊರ ಗುತ್ತಿಗೆಯಾಧಾರದ ಮೇಲೆ ನೌಕರರು ಕಡಿಮೆ ವೇತನಕ್ಕೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ನೇರ ನೇಮಕಾತಿ ಮಾಡಿಕೊಂಡು ರಾಜ್ಯದ 3 ಸಾವಿರಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ನಿತ್ಯಾನಂದಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

    ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊರ ಗುತ್ತಿಗೆ ನೌಕರರಿಗೆ ಎಂದಿನಂತೆ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಅದೇರೀತಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಅನುಸರಿಸಿ, ನೌಕರರ ಹಿತ ಕಾಪಾಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಆರ್.ಲತಾ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ.ಶ್ರೀರಾಮುಲುಗೆ ಮನವಿ ಸಲ್ಲಿಸಿದರು.

    ಸಂಘದ ಜಿಲ್ಲಾಧ್ಯಕ್ಷ ಬಿ.ಆಂಜನೇಯರೆಡ್ಡಿ, ಕಾರ್ಯದರ್ಶಿ ಕೆ.ಮುನಿಯಪ್ಪ, ಪದಾಧಿಕಾರಿಗಳಾದ ನವೀನ್ ಕುಮಾರ್, ಪ್ರಮೀಳಮ್ಮ, ಕದಿರಪ್ಪ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts