More

    ಹೊಲದಲ್ಲಿ ಹುಲಿ ಹೆಜ್ಜೆ ಪತ್ತೆ

    ಹನಗೋಡು: ಹೋಬಳಿಯ ಕಾಡಂಚಿನ ಗ್ರಾಮಗಳಲ್ಲಿ ಹುಲಿ ಹೆಜ್ಜೆಗಳು ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ.


    ನಾಗರಹೊಳೆ ಅರಣ್ಯದಂಚಿನಿಂದ ಕೂಗಳತೆ ದೂರದಲ್ಲಿರುವ ಮುದಗನೂರು, ಕೊಳವಿಗೆ ಗ್ರಾಮದ ಮುಸುಕಿನ ಜೋಳದ ಹೊಲದಲ್ಲಿ ಹುಲಿ ಹೆಜ್ಜೆ ಗುರುತುಗಳು ಮಂಗಳವಾರ ರಾತ್ರಿ ಪತ್ತೆಯಾಗಿದ್ದು, ಸುತ್ತಲಿನ ಗ್ರಾಮಸ್ಥರು ಆತಂಕದಲ್ಲಿದ್ದಾರೆ.


    ಈ ಭಾಗದಲ್ಲಿ ಕಳೆದ 3-4 ದಿನಗಳಿಂದ ಜಮೀನು ಹಾಗೂ ಗ್ರಾಮದ ಅಕ್ಕಪಕ್ಕ ಹುಲಿ ಹೆಜ್ಜೆ ಪತ್ತೆಯಾಗುತ್ತಿದ್ದು, ಭೀತಿ ಎದುರಾಗಿದೆ. ಅರಣ್ಯದಂಚಿನ ಹೊಲಗಳಿಗೆ ರೈತರು ಹೋಗಿ ಬರಲು ಸಾಧ್ಯವಾಗುತ್ತಿಲ್ಲ. ಅರಣ್ಯ ಇಲಾಖೆ ಗಮನಕ್ಕೆ ತರಲಾಗಿದೆ. ಕಳೆದ ವರ್ಷ ಸಮೀಪದ ಕೊಳವಿಗೆ ಹಾಡಿಯಲ್ಲಿ ಹುಲಿ ದಾಳಿಗೆ ಗಿರಿಜನ ಯುವಕನೊಬ್ಬ ಮೃತಪಟ್ಟಿದ್ದ. ಇಲಾಖೆ ಕೂಂಬಿಂಗ್ ನಡೆಸಿ ಹುಲಿ ಸೆರೆ ಹಿಡಿದು ಅರಣ್ಯಕ್ಕೆ ಬಿಡಬೇಕು ಎಂದು ಮುದಗನೂರು ಗ್ರಾಮದ ರೈತ ಮುಖಂಡ ಮಹದೇವ ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts