More

    ಹೊಸಕೋಟೆಯಲ್ಲಿ ಅಭಿವೃದ್ಧಿ ಪರ್ವ, ಸಚಿವ ಎಂಟಿಬಿ ನಾಗರಾಜ್ ಭರವಸೆ, ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಚಾಲನೆ

    ಬೆಂಗಳೂರು ಗ್ರಾಮಾಂತರ: ಸ್ಯಾಟಲೈಟ್ ಟೌನ್ ನಿರ್ಮಾಣದ ಕನಸಿನೊಂದಿಗೆ ಹೊಸಕೋಟೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಪೂರ್ಣ ಸಹಕಾರವಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕಾ ಖಾತೆ ಸಚಿವ ಎಂಟಿಬಿ ನಾಗರಾಜ್ ಹೇಳಿದರು.

    ಹೊಸಕೋಟೆಯ ವಾರ್ಡ್31ರಲ್ಲಿ ಭಾನುವಾರ ಮನೆಮನೆಗೆ ನಲ್ಲಿ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

    ಹೊಸಕೋಟೆಯಲ್ಲಿ 150 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಆಗಮಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ಯಾಟಲೈಟ್ ಟೌನ್ ಕನಸನ್ನು ನನಸು ಮಾಡುವ ಭರವಸೆ ನೀಡಿದ್ದಾರೆ. ಈ ಯೋಜನೆಯಡಿ ಹೊಸಕೋಟೆಗೆ ಎಲ್ಲ ಮೂಲಸೌಕರ್ಯಗಳು ಲಭ್ಯವಾಗಲಿವೆ ಎಂದರು.

    ಮೆಟ್ರೋಗೆ ಸಾಕಷ್ಟು ಒತ್ತಡ: ಹೊಸಕೋಟೆಗೆ ಮೆಟ್ರೋ ಸಂಚಾರ ವಿಸ್ತರಿಸುವಂತೆ ಕೇಂದ್ರ ಸಚಿವರಿಗೆ ಈಗಾಗಲೇ ಪತ್ರ ನೀಡಿದ್ದೇನೆ. ಅವರಿಂದಲೂ ಸ್ಪಂದನೆ ಸಿಕ್ಕಿದೆ. ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ರಾಜ್ಯ ಸರ್ಕಾರವೂ ಒಲವು ತೋರಿಸಿದೆ. ಮೆಟ್ರೋ ವಿಸ್ತರಣೆ ಕನಸು ಶೀಘ್ರ ಸಾಕಾರಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.

    ವೇಗವಾಗಿ ಬೆಳೆಯುತ್ತಿದೆ: ರಾಜ್ಯ ರಾಜಧಾನಿ ಹೆಬ್ಬಾಗಿಲಾಗಿರುವ ಹೊಸಕೋಟೆ ವೇಗವಾಗಿ ಬೆಳೆಯುತ್ತಿದೆ. ಬೃಹತ್ ಕೈಗಾರಿಕೆಗಳು ತಲೆ ಎತ್ತುತ್ತಿದ್ದು, ಕೈಗಾರಿಕೆ ವಲಯವಾಗಿ ಮುಂಚೂಣಿಗೆ ಬರುತ್ತಿದೆ. ಬೇರೆ ಬೇರೆ ರಾಜ್ಯದ ಸಾವಿರಾರು ಜನರು ಉದ್ಯೋಗ ಅರಸಿಕೊಂಡು ತಾಲೂಕಿಗೆ ಬರುತ್ತಿದ್ದು, ಇಲ್ಲೆ ವಾಸ್ತವ್ಯ ಕಂಡುಕೊಂಡಿದ್ದಾರೆ. ಆದ್ದರಿಂದ ಎಲ್ಲರಿಗೂ ಮೂಲಸೌಕರ್ಯ ಕಲ್ಪಿಸುವ ಜತೆಗೆ ಹೊಸಕೋಟೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದರು.

    ದೊಡ್ಡ ವಾರ್ಡ್‌ಗಳ ಅಭಿವೃದ್ಧಿ ಸವಾಲು: ಗ್ರಾಪಂ ವ್ಯಾಪ್ತಿಯಿಂದ ನಗರಸಭೆ ವ್ಯಾಪ್ತಿಗೆ ಸೇರಿದ ವಾರ್ಡ್‌ಗಳ ಅಭಿವೃದ್ಧಿ ಸವಾಲನ್ನು ಸಮರ್ಥವಾಗಿ ನಿರ್ವಹಿಸುವ ಕೆಲಸವಾಗುತ್ತಿದೆ. ಈ ಭಾಗಗಳಲ್ಲಿ ಕುಡಿಯುವ ನೀರು, ಚರಂಡಿ ರಸ್ತೆ ಮತ್ತಿತರ ಕಾಮಗಾರಿಗಳ ಬೇಡಿಕೆ ಇದೆ. ನಗರೋತ್ಥಾನ ನಾಲ್ಕನೇ ಹಂತದಲ್ಲಿ 12 ಕೋಟಿ ರೂ. ಹಾಗೂ ವಿಶೇಷ ಅನುದಾನ 5 ಕೋಟಿ ರೂ. ಸೇರಿ 17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ.ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದರು.

    ರಾಜೀನಾಮೆ ಹಿಂದೆ ಅಭಿವೃದ್ಧಿ ಮಂತ್ರ: ಈ ಹಿಂದೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ವಸತಿ ಸಚಿವನಾಗಿದ್ದರೂ ಕ್ಷೇತ್ರಕ್ಕೆ ನಿರೀಕ್ಷಿತ ಅನುದಾನ ನೀಡಲಿಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡಿ ಹೊರಬಂದೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕುಳಿತವನಲ್ಲ ಎಂದು ಪುನರುಚ್ಚರಿಸಿದ ಸಚಿವರು, ನಾನು ಯಾವತ್ತು ಅಧಿಕಾರ ಅಥವಾ ಹಣಕ್ಕೆ ಆಸೆಪಟ್ಟವನಲ್ಲ. ಅಭಿವೃದ್ಧಿ ಮಂತ್ರ ಜಪಿಸುತ್ತಲೇ ಪ್ರಾಮಾಣಿಕ ಪ್ರಯತ್ನ ನಡೆಸುತ್ತಾ ಬಂದಿದ್ದೇನೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts