More

    ಹೊಸ ನಿಯಮಗಳ ಜಾರಿ ಅಗತ್ಯವಿಲ್ಲ

    ಸಾಗರ: ಕರೊನಾ ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಧಿಸಿರುವ ನಿಯಮಗಳನ್ನು ತಾಲೂಕು ಆಡಳಿತ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಲಾಕ್​ಡೌನ್​ಗೆ ಸಂಬಂಧಿಸಿ ಹೊಸ ನಿಯಮ ಜಾರಿಗೆ ತರುವುದು ಬೇಡ. ಇದರಿಂದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗುತ್ತದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.

    ಎಸಿ ಕಚೇರಿಯಲ್ಲಿ ಮಂಗಳವಾರ ಅಧಿಕಾರಿಗಳ ತುರ್ತು ಸಭೆಯಲ್ಲಿ ಮಾತನಾಡಿ, ಈಗಾಗಲೆ ಕೆಲ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಇನ್ನು ಕೆಲವರು ಸಮಯ ನಿಗದಿ ಮಾಡಿಕೊಂಡಿದ್ದಾರೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಲಾಕ್​ಡೌನ್ ಸಮಯ ನಿಗದಿಗೊಳಿಸುವ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದರು.

    ಗ್ರಾಪಂಗಳಲ್ಲಿ ಚುನಾಯಿತ ಆಡಳಿತ ಮಂಡಳಿ ಇಲ್ಲ. ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಇದರಿಂದ ಗ್ರಾಪಂ ವ್ಯಾಪ್ತಿಯ ಟಾಸ್ಕ್​ಫೋರ್ಸ್ ಕೆಲಸ ಕುಂಠಿತವಾಗುವ ಸಾಧ್ಯತೆ ಇದೆ. ಅವರ ಸಭೆ ಕರೆದು ಕರೊನಾ ಟಾಸ್ಕ್​ಫೋರ್ಸ್ ಕ್ರಿಯಾಶೀಲಗೊಳಿಸುವಂತೆ ತಾಪಂ ಇಒಗೆ ಸೂಚಿಸಿದರು.

    ಎಸಿ ಡಾ. ಎಲ್.ನಾಗರಾಜ್ ಮಾತನಾಡಿ, ಉಪವಿಭಾಗೀಯ ಆಸ್ಪತ್ರೆಯಲ್ಲಿ ಕರೊನಾ ಪರೀಕ್ಷೆ ಮಾಡಲಾಗುತ್ತಿದೆ. ಅಲ್ಲದೆ ಚಿಕಿತ್ಸೆಗಾಗಿ 150 ಹಾಸಿಗೆ ಸಾರ್ಮರ್ಥ್ಯದ ವಿಶೇಷ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

    ಡಿವೈಎಸ್ಪಿ ವಿನಾಯಕ ಶೆಟ್ಟಿಗಾರ್, ಇಒ ಪುಷ್ಪಾ ಎಂ.ಕಮ್ಮಾರ್, ಡಾ. ಪ್ರಕಾಶ್ ಬೋಸ್ಲೆ, ಡಾ. ಸುಮಾ, ಟಿ.ಪರಮೇಶ್ವರ್, ಎಪಿಎಂಸಿ ಅಧ್ಯಕ್ಷ ಚೇತನರಾಜ್ ಕಣ್ಣೂರು, ಪರಿಸರ ಅಭಿಯಂತ ಪ್ರಭಾಕರ್ ಇತರರಿದ್ದರು.

    ನಗರಸಭೆಗೆ ಬರದಂತೆ ಜನರಿಗೆ ಮನವಿ ಮಾಡಲಾಗಿದೆ. ನಗರಸಭೆಯಿಂದ ಜನರಿಗೆ ಆಗಬೇಕಾದ ಕೆಲಸವನ್ನು ದೂರವಾಣಿ ಸಂಖ್ಯೆ (08183-226021)ಗೆ ಕರೆ ಮಾಡಿ ತಿಳಿಸಿದರೆ ಸಾಕು. ಖಾತೆ ಬದಲಾವಣೆ, ಕಂದಾಯ ಪಾವತಿ ಸೇರಿ ಇತರೆ ಸಮಸ್ಯೆಗಳಿಗೂ ಪರಿಹಾರ ಒದಗಿಸಲಾಗುವುದು.

    | ಎಚ್.ಕೆ.ನಾಗಪ್ಪ, ಪೌರಾಯುಕ್ತ

    ತಾಲೂಕಿನಲ್ಲಿ ಈವರೆಗೆ 13 ಕರೊನಾ ಪ್ರಕರಣ ಪತ್ತೆಯಾಗಿದ್ದು, ಈ ಪೈಕಿ ಮೂವರು ಗುಣಮುಖರಾಗಿದ್ದಾರೆ. ಸೋಮವಾರ ನಗರ ವ್ಯಾಪ್ತಿಯಲ್ಲಿ 3 ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 1 ಕರೊನಾ ಪಾಸಿಟಿವ್ ಪತ್ತೆಯಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪ್ರಾಥಮಿಕ ತನಿಖೆಗೆ ಒಳಪಡಿಸಲಾಗಿದೆ.

    | ಡಾ. ಕೆ.ಎಸ್.ಮೋಹನ್, ಟಿಎಚ್​ಒ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts