More

    ಹೊಸ ಮತದಾರರ ಹೆಚ್ಚಳಕ್ಕೆ ಜಾಗೃತಿ ಮೂಡಿಸಿ: ವಸ್ತ್ರದ್

    ದಾವಣಗೆರೆ:ಜಿಲ್ಲೆಯಲ್ಲಿ ಹೊಸ ಮತದಾರರ ನೋಂದಣಿ ಹಾಗೂ ಎಲ್ಲ ನೋಂದಾಯಿತ ಅರ್ಹ ಮತದಾರರಿಗೆ ಗುರುತಿನ ಚೀಟಿ ಪಡೆಯುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಸೂಚಿಸಿದರು.
    ಜಿಪಂ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿಗಳೊಂದಿಗೆ ಜಿಲ್ಲೆಯ ಸ್ವೀಪ್ ಕಾರ್ಯಚಟುವಟಿಕೆ ಮತ್ತು ಮತದಾರರ ಸಾಕ್ಷರತಾ ಸಂಘಗಳ ಚಟುವಟಿಕೆ ಕುರಿತಂತೆ ಪರಿಶೀಲನೆ ನಡೆಸಿದ ಅವರು, 2023ಕ್ಕೆ ಹೊಸ ಮತದಾರರ ನೋಂದಣಿ ಸಂಖ್ಯೆ ಹೆಚ್ಚಳವಾಗಬೇಕು ಎಂದರು.
    ಜಿಪಂ ಸಿಇಒ ಡಾ.ಎ.ಚನ್ನಪ್ಪ ಮಾತನಾಡಿ ಶಾಲಾ-ಕಾಲೇಜುಗಳಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚಿತ್ರಕಲೆ, ಪ್ರಬಂಧ, ಚರ್ಚಾಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, ಆಶುಭಾಷಣ ವಿವಿಧ ಸ್ಪರ್ಧೆ ಮತ್ತು ವಿಚಾರ ಸಂಕಿರಣ ನಡೆಸಲಾಗಿದೆ ಎಂದರು.
    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಸ್ತ್ರೀಶಕ್ತಿ ಸಂಘಗಳ ಮತದಾರರಿಗೆ ಅರಿವು ಮೂಡಿಸುವ ಸಲುವಾಗಿ ವಿಶೇಷ ಶಿಬಿರಗಳನ್ನು ಹಮ್ಮಿಕೊಂಡು ಅಂಗನವಾಡಿ ಕಾರ್ಯಕರ್ತೆಯರ ನೇತೃತ್ವದಲ್ಲಿ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
    ಸಭೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗರಾಜ್, ಜಿಲ್ಲಾ ಶಿಕ್ಷಣ ಅಧಿಕಾರಿ ತಿಪ್ಪೇಶಪ್ಪ ಸೇರಿ ಸ್ವೀಪ್ ಸಮಿತಿಯ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.
    —-

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts