More

    ಹೊಸ ವೈದ್ಯರಿಗೆ ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡಲು ಹೆಚ್ಚು ಒತ್ತು ನೀಡಬೇಕು

    ಹಾಸನ: ಗ್ರಾಮೀಣ ಪ್ರದೇಶಗಳಲ್ಲೂ ವೈದ್ಯರು ಸೇವೆ ಸಲ್ಲಿಸುವ ಮೂಲಕ ಸರ್ವರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಮಾನಸಿಕ ಆರೋಗ್ಯ ತಜ್ಞ, ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್.ಚಂದ್ರಶೇಖರ್ ಅವರು ಸಲಹೆ ನೀಡಿದರು.
    ನಗರದ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ 13ನೇ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಾಕಷ್ಟು ವೈದ್ಯರಿದ್ದರೂ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆ ಇದೆ. ಯುವ ವೈದ್ಯರು ಹಳ್ಳಿಗಳಲ್ಲಿ ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಾರೆ. ಆದರೆ ಗ್ರಾಮೀಣ ಆಸ್ಪತ್ರೆಗಳಲ್ಲಿ ಕೆಲಸ ಮಾಡುವುದರಿಂದ ಸಮಾಜಕ್ಕೆ ಕೊಡುಗೆ ನೀಡಿದಂತಾಗುತ್ತದೆ. ಸರ್ಕಾರವೂ ಸಹ ಈ ನಿಟ್ಟಿನಲ್ಲಿ ಚಿಂತಿಸಿ ಗ್ರಾಮೀಣ ವೈದ್ಯರಿಗೆ ಹೆಚ್ಚಿನ ಸವಲತ್ತು ಕಲ್ಪಿಸಬೇಕು ಎಂದರು.
    ನಿವೃತ್ತ ಪೊಲೀಸ್ ಮಹಾನಿರೀಕ್ಷಕ ಶಂಕರ್ ಮಹದೇವ್ ಬಿದರಿ ಅವರು ಮಾತನಾಡಿ, ಯಾವುದಾದರು ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂದರೆ ಪ್ರಾಮಾಣಿಕತೆ, ತಾಳ್ಮೆ ಹಾಗು ಪರಿಶ್ರಮ ಅವಶ್ಯವಾಗಿರುತ್ತದೆ. ಶ್ರಮ ಬಲ್ಲವನಿಗೆ ಸಾಧನೆ ಖಚಿತ. ನವ ವೈದ್ಯರೆಲ್ಲಾ ತಂದೆ-ತಾಯಿಗೆ ಗೌರವ ಬರುವಂತಹ ಕೆಲಸ ಮಾಡಬೇಕು. ಎಲ್ಲರಿಗೂ ಈ ಅವಕಾಶ ಸಿಗುವುದಿಲ್ಲ. ಬಡವರ ಸೇವೆ ಮೂಲಕ ಜೀವನನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
    ಹಿಮ್ಸ್ ನಿರ್ದೇಶಕ ಡಾ.ಎಸ್.ವಿ.ಸಂತೋಷ್ ಅಧ್ಯಕ್ಷತೆ ವಹಿಸಿದ್ದರು.
    ಹಿಮ್ಸ್ ಮುಖ್ಯ ಆಡಳಿತ ಅಧಿಕಾರಿ ಡಾ.ರೇಖಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಚ್.ಸಿ.ಲೋಕೇಶ್, ವೈದ್ಯಕೀಯ ಅಧೀಕ್ಷಕ ಡಾ.ಕೆ.ಯು.ರಾಘವೇಂದ್ರ ಪ್ರಸಾದ್, ಡಾ.ಪಿ.ಕೆ.ಚನ್ನವೀರಪ್ಪ, ಡಾ.ಜಿ.ಪ್ರವೀಣ್, ಡಾ.ಎಸ್.ಮಂಜುನಾಥ, ಡಾ.ಎನ್.ಶ್ರೀರಂಗ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts