More

    ಹೋಂ ಕ್ವಾರಂಟೈನ್ ಮತ್ತಷ್ಟು ಬಿಗಿ

    ಧಾರವಾಡ: ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ಕರೊನಾ ಪೀಡಿತರ ಸಂಖ್ಯೆ ಹೆಚ್ಚಳವಾಗಿದೆ. ಅದರಿಂದ ಸಾರ್ವಜನಿಕರು ಆತಂಕ ಪಡಬಾರದು. ಕರೊನಾ ವೈರಸ್ ಇತರರಿಗೆ ಹರಡದಂತೆ ಪರಸ್ಪರ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧಾರಣೆ ಮತ್ತು ಸೋಪು ಅಥವಾ ಸ್ಯಾನಿಟೈಸರ್ ಬಳಸಿ ಕೈತೊಳೆಯಬೇಕು. ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಪ್ರತಿಯೊಬ್ಬರೂ ವೈಯಕ್ತಿಕ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

    ತಮ್ಮ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸರ್ಕಾರ ನೀಡುವ ಸೂಚನೆ, ಸುತ್ತೋಲೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಕರೊನಾ ಹರಡುವಿಕೆ ತಡೆಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಭಾನುವಾರ ಸಂಜೆವರೆಗೆ 21,112 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 121 ಜನರಲ್ಲಿ ಕರೊನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ 50 ಜನ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ ಎಂದರು.

    ಸರ್ಕಾರದ ಹೊಸ ನಿಯಮದಂತೆ ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ 7 ದಿನ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತದೆ. ಉಳಿದ ರಾಜ್ಯಗಳಿಂದ ಬರುವವರಿಗೆ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಸಾರ್ವಜನಿಕರು ಅನಗತ್ಯ ತಿರುಗಾಟ, ಪ್ರವಾಸಗಳನ್ನು ನಿಲ್ಲಿಸಬೇಕು. 10 ವರ್ಷದೊಳಗಿನ ಮಕ್ಕಳು, 60 ವರ್ಷಕ್ಕಿಂತ ಹೆಚ್ಚು ವಯಸ್ಸಾದವರು, ಗರ್ಭಿಣಿಯರು ಮನೆಯಿಂದ ಹೊರಗೆ ಬರಬಾರದು ಎಂದರು.

    ಪ್ರತಿದಿನ ದೆಹಲಿ ಮತ್ತು ಮಹಾರಾಷ್ಟ್ರದ ರೈಲು ಬರುತ್ತಿವೆ. ಅದರಲ್ಲಿ ಜಿಲ್ಲೆಗೆ ಬರುವವರನ್ನು ಸಾಂಸ್ಥಿಕ ಮತ್ತು ಹೋಂ ಕ್ವಾರಂಟೈನ್​ಗೆ ಒಳಪಡಿಸಲಾಗುತ್ತಿದೆ. 5 ಹಾಸ್ಟೆಲ್​ಗಳಲ್ಲಿ 125 ಜನ ಇದ್ದಾರೆ. 9 ಹೋಟೆಲ್​ಗಳಲ್ಲಿ 45 ಜನ ಸ್ವಂತ ವೆಚ್ಚದಲ್ಲಿ ಕ್ವಾರಂಟೈನ್ ಆಗಿದ್ದಾರೆ ಎಂದು ಅವರು ತಿಳಿಸಿದರು.

    ಐವರ ವಿರುದ್ಧ ಪ್ರಕರಣ: ಸರ್ಕಾರದ ಮಾರ್ಗಸೂಚಿ ಪ್ರಕಾರ ಹೋಂ ಕ್ವಾರಂಟೈನ್ ನಿಯಮ ಬಿಗಿಗೊಳಿಸಲಾಗುತ್ತಿದೆ. ಹೋಂ ಕ್ವಾರಂಟೈನ್ ಆದವರ ಮನೆಗೆ ಪೋಸ್ಟರ್ ಅಂಟಿಸಿ, ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡಲಾಗುತ್ತಿದೆ. ಕ್ವಾರಂಟೈನ್ ಆದವರು ಪ್ರತಿದಿನ ಸೆಲ್ಪಿ ತೆಗೆದು ಅಪ್​ಲೋಡ್ ಮಾಡಲು ಸೂಚಿಸಲಾಗಿದೆ. ಹೋಂ ಕ್ವಾರಂಟೈನ್​ದಲ್ಲಿರುವವರು ಹೊರಗೆ ಸುತ್ತಾಡಿದರೆ ಸಾರ್ವಜನಿಕರು 1077 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು. ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 5 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದರು. ಕೆಮ್ಮು, ನೆಗಡಿ, ಜ್ವರ ನಿರ್ಲಕ್ಷಿಸದೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಫೀವರ್ ಕ್ಲಿನಿಕ್​ನಲ್ಲಿ ಪರೀಕ್ಷೆಗೆ ಒಳಗಾಗಬೇಕು ಎಂದು ಮನವಿ ಡಿದರು.

    ಸುದ್ದಿಗೋಷ್ಠಿಯಲ್ಲಿ ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಪೊ›. ಶೈಲೇಂದ್ರ, ಪೊ›. ಈಶ್ವರ ಹಸಬಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts