More

    ಹೋಂ ಗಾರ್ಡ್​ಗಳಿಗೆ ದಿನಸಿ ವಿತರಣೆ

    ಜೊಯಿಡಾ: ಇಲ್ಲಿನ ಹೋಂ ಗಾರ್ಡ್​ಗಳಿಗೆ ಮತ್ತು ಬ್ಯೂಟಿ ಪಾರ್ಲರ್ ನಡೆಸುವ ಮಹಿಳೆಯರಿಗೆ ಶಾಸಕ ಆರ್.ವಿ. ದೇಶಪಾಂಡೆ ದಿನಸಿ ವಸ್ತುಗಳ ಕಿಟ್ ವಿತರಿಸಿದರು.

    ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಈ ಕಿಟ್ ಮತ್ತು ಮಾಸ್ಕ್​ಗಳನ್ನು ವಿತರಿಸಿದ ಅವರು, ಕರೊನಾ ಲಾಕ್​ಡೌನ್ ಸಂದರ್ಭದಲ್ಲಿ ಜಿಲ್ಲಾಡಳಿತ, ತಾಲೂಕಾಡಳಿತ, ವಿವಿಧ ಇಲಾಖೆಗಳ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ನನ್ನ ಕ್ಷೇತ್ರದಲ್ಲಿನ ಎಲ್ಲ ಗ್ರಾಮ ಪಂಚಾಯಿತಿಗಳಿಗೆ 5 ಸಾವಿರ ಮಾಸ್ಕ್ ನೀಡಿದ್ದೇನೆ. ಪತ್ರಕರ್ತರು ಕೂಡ ಈ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದಾರೆ ಎಂದರು.

    ಕೇಂದ್ರ ಸರ್ಕಾರದ ಪ್ಯಾಕೇಜ್​ಗೆ ಮೆಚ್ಚುಗೆ:
    ಕೇಂದ್ರ ಸರ್ಕಾರ ಘೊಷಿಸಿರುವ 20 ಲಕ್ಷ ಕೋಟಿ ರೂ.ಆರ್ಥಿಕ ಪ್ಯಾಕೇಜ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ದೇಶಪಾಂಡೆ ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಅರ್ಹರಿಗೆ ಸಿಗುವ ಕಾರ್ಯ ಆಗಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts