More

    ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

    ಕೊಡಗು : ಕ್ರೀಡಾಪಟುಗಳು ಅಥ್ಲೆಟ್ ಆಗಿದ್ದರೆ ಮಾತ್ರ ಇತರ ಕ್ರೀಡೆಗಳಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಅಂತಾರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಹೇಳಿದರು.
    ಶಿಕ್ಷಣ ಇಲಾಖೆ ವತಿಯಿಂದ ವಿರಾಜಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳ ಹೋಬಳಿ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ನಾನು 42 ಬಾರಿ ಅಂತಾರಾಷ್ಟ್ರೀಯ ಮಟ್ಟದ ರಗ್ಬಿ ಆಟದಲ್ಲಿ ಭಾಗವಹಿಸಿದ್ದೇನೆ. ಆದರೆ ನನ್ನ ಕ್ರೀಡೆಯ ಪಯಣ ಅಥ್ಲೇಟ್ ಆಗಿ ಇದೇ ಮೈದಾನದಿಂದ ಆರಂಭವಾಗಿತ್ತು ಅನುಭವ ಹಂಚಿಕೊಂಡರು.
    ವಿರಾಜಪೇಟೆ ಜೂನಿಯರ್ ಕಾಲೇಜು ಮೈದಾನ ಅನೇಕ ಕ್ರೀಡಾಪಟುಗಳ ಬದುಕನ್ನು ಹಸನಾಗಿಸಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಸಹಕಾರಿಯಾಗಿದೆ. ಹಾಗಾಗಿ, ಪ್ರತಿಯೊಬ್ಬರು ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ, ಬೀಳಗಿ ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರೋಹಿತ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್ ಹಾಗೂ ಉಪಾಧ್ಯಕ್ಷ ಮೊಣ್ಣಪ್ಪ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ತಮ್ಮಯ್ಯ, ಪರಿವೀಕ್ಷಕಿ ಗಾಯತ್ರಿ, ಪ್ರೌಢಶಾಲೆ ಮುಖ್ಯ ಶಿಕ್ಷಕಿ ಪ್ರತೀಕಾ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನ್ನಮ್ಮ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts